Friday, February 13, 2026
Homeಜಿಲ್ಲಾಸುದ್ದಿಚಾರ್ಮಾಡಿ ಘಾಟಿಯಲ್ಲಿ KSRTC ಬಸ್ -2 ಲಾರಿಗಳ ಮಧ್ಯೆ ಭೀಕರ ಅಪಘಾತ : ಬಸ್ ಚಾಲಕನ...

ಚಾರ್ಮಾಡಿ ಘಾಟಿಯಲ್ಲಿ KSRTC ಬಸ್ -2 ಲಾರಿಗಳ ಮಧ್ಯೆ ಭೀಕರ ಅಪಘಾತ : ಬಸ್ ಚಾಲಕನ ಸ್ಥಿತಿ ಗಂಭೀರ

ಮೂಡಿಗೆರೆ : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು – ದಕ್ಷಿಣ ಕನ್ನಡ ಗಡಿಭಾಗದ ಚಾರ್ಮಾಡಿ ಘಾಟಿಯಲ್ಲಿ ಭಾರೀ ಸರಣಿ ಅಪಘಾತ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 179ರಲ್ಲಿ ನಡೆದ ಈ ಅಪಘಾತದಲ್ಲಿ KSRTC ಬಸ್ ಹಾಗೂ ಎರಡು ಲಾರಿಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡಿವೆ.

ಪ್ರಾಥಮಿಕ ಮಾಹಿತಿಯಂತೆ, KSRTC ಬಸ್ ಗ್ಯಾಸ್ ಸಿಲಿಂಡರ್ ಹೊತ್ತಿದ್ದ ಲಾರಿಗೆ ನೇರವಾಗಿ ಡಿಕ್ಕಿ ಹೊಡೆದಿದೆ. ತಕ್ಷಣವೇ ಹಿಂಬದಿಯಿಂದ ಮತ್ತೊಂದು ಲಾರಿ ಗ್ಯಾಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ತೀವ್ರಗೊಂಡಿದೆ. ಇದರಲ್ಲಿ KSRTC ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ.

ಅಪಘಾತದ ಪರಿಣಾಮವಾಗಿ ಚಾರ್ಮಾಡಿ ಘಾಟಿಯಲ್ಲಿ ಭಾರೀ ವಾಹನ ಜಾಮ್ ಉಂಟಾಗಿದೆ. ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದು, ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ.

ಘಟನೆಯ ಮಾಹಿತಿ ಪಡೆದ ತಕ್ಷಣ ಬಣಕಲ್ ಮತ್ತು ಬೆಳ್ತಂಗಡಿ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಸಂಚಾರ ನಿಯಂತ್ರಣ ಕಾರ್ಯ ಕೈಗೊಂಡಿದ್ದಾರೆ. ಈ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!