Saturday, February 7, 2026
Homeಕ್ರೈಮ್ಕುಂದಾಪುರ: ಬಸ್ - ಟಿಪ್ಪರ್ ನಡುವೆ ಭೀಕರ ಅಪಘಾತ: ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ

ಕುಂದಾಪುರ: ಬಸ್ – ಟಿಪ್ಪರ್ ನಡುವೆ ಭೀಕರ ಅಪಘಾತ: ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ

ಕುಂದಾಪುರ: ಸರ್ಕಾರಿ ಬಸ್ ಹಾಗೂ ಟಿಪ್ಪರ್ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ 7 ವಿದ್ಯಾರ್ಥಿಗಳು ಸೇರಿದಂತೆ 15 ಜನ ಗಂಭೀರವಾಗಿ ಗಾಯಗೊಂಡ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಲ್ಲೂರು-ನೇರಳಕಟ್ಟೆ ಮಾರ್ಗದ ಶೆಟ್ರಕಟ್ಟೆ ತಿರುವಿನಲ್ಲಿ ಸಂಭವಿಸಿದೆ.

ಕುಂದಾಪುರದಿಂದ ಆಜ್ರಿ-ಸಿದ್ದಾಪುರ ಕಡೆಗೆ ಸಾಗುತ್ತಿದ್ದ ಸರ್ಕಾರಿ ಬಸ್ ಗೆ ನೇರಳಕಟ್ಟೆಯಿಂದ ಮಣ್ಣು ತುಂಬಿಸಿಕೊಂಡು ತಲ್ಲೂರಿನತ್ತ ಸಾಗುತ್ತಿದ್ದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಬಸ್ ನ ಬಲ ಬದಿಗೆ ಡಿಕ್ಕಿ ಹೊಡೆದಿದ್ದರಿಂದ ಚಾಲಕನ ಬದಿಯ ಒಂದು ಪಾರ್ಶ್ವ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ 7 ಮಂದಿ ವಿದ್ಯಾರ್ಥಿಗಳು ಸೇರಿದಂತೆ 15 ಮಂದಿಗೆ ಗಂಭೀರ ಗಾಯಗಳಾಗಿವೆ. ಅಪಘಾತದ ಸಿಸಿ ಕ್ಯಾಮೆರಾ ಫೂಟೇಜ್ ಲಭ್ಯವಾಗಿದ್ದು ಭೀಕರತೆಯನ್ನು ತೋರಿಸುತ್ತದೆ.ಅತಿವೇಗದಿಂದ ಟಿಪ್ಪರ್ ಚಲಾಯಿಸುತ್ತಿದ್ದ ಚಾಲಕನ ನಿರ್ಲಕ್ಷ್ಯ ಮತ್ತು ಅತಿವೇಗವೇ ಘಟನೆಗೆ ಕಾರಣವಾಗಿದ್ದು ಆತ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!