ಶೃಂಗೇರಿ: ಕಡಬಗೆರೆಯಲ್ಲಿ ಪ್ರತಿಭಟನ ನಿರತ ರೈತರ ಮೇಲೆ ಲಾಠಿ ಚಾರ್ಜ್ ಹಾಗೂ ಬಂಧನ ಖಂಡಿಸಿ ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದಿಂದ ಕ್ಷೇತ್ರಾದ್ಯಂತ ಸೋಮವಾರ ಸ್ವಯಂ ಪ್ರೇರಿತ ಬಂದ್ ಗೆ ಕರೆ ನೀಡಲಾಗಿದೆ ಎಂದು ಶೃಂಗೇರಿ ಕ್ಷೇತ್ರ ರೈತ ಒಕ್ಕೂಟ ಅಧ್ಯಕ್ಷರಾದ ವಿಶ್ವನಾಥ್ ಗದ್ದೆಮನೆ ತಿಳಿಸಿದ್ದಾರೆ.
ಶೃಂಗೇರಿ ಕ್ಷೇತ್ರದ ಎಲ್ಲಾ ರೈತರು, ಸಾರ್ವಜನಿಕರು ಹಾಗೂ ವರ್ತಕರು ಸ್ವಯಂ ಪ್ರೇರಿತ ಬಂದ್ ನಲ್ಲಿ ಭಾಗವಹಿಸಿ ರೈತರ ಪರವಾಗಿ ನಿಲ್ಲಬೇಕಾಗಿ ಈ ಮೂಲಕ ಕೋರಿಕೊಳ್ಳುತ್ತೇವೆ ಎಂದು ಮನವಿ ಮಾಡಿಕೊಂಡರು.
ಚಿಕ್ಕಮಗಳೂರು ಭಾಗದ ಜನರಿಗೆ ಕಾಡಾನೆ ಕಾಟದಿಂದ ತಪ್ಪಿಸಿಕೊಳ್ಳಲು ಆಗ್ತಿಲ್ಲ. ಎಷ್ಟೇ ಹೋರಾಟ ನಡೆಸಿದರೂ ಮಾನವ, ಕಾಡುಪ್ರಾಣಿ ಸಂಘರ್ಷ ನಿಲುತ್ತಿಲ್ಲ. ವಾರದ ಹಿಂದಷ್ಟೇ ಕಾಡಾನೆ ದಾಳಿಗೆ ಹಾವೇರಿ ಮೂಲದ ಕಾರ್ಮಿಕ ಯಲ್ಲಪ್ಪ ಬಲಿ ಆಗಿದ್ದ. ಅಂದು ಆಕ್ರೋಶ ಹೊರಹಾಕ್ತಿದ್ದಂತೆ ದಾಳಿ ಮಾಡ್ತಿರೋ ಆನೆಯನ್ನ ಹಿಡಿಯೋದಾಗಿ ಅರಣ್ಯ ಇಲಾಖೆ ಭರವಸೆ ನೀಡಿತ್ತು. ಹೀಗಿರುವಾಗಲೇ ಇಂದು ಮತ್ತೊಬ್ಬ ಕಾರ್ಮಿಕ ಮಹಿಳೆ ಕಾಡಾನೆ ದಾಳಿಗೆ ಬಲಿ ಆಗಿದ್ದಾರೆ.
