ಬಾಳೆಹೊನ್ನೂರು: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಕಡಬಗೆರೆಯ ಹೊನ್ನೇಕೊಪ್ಪ ಗ್ರಾಮದಲ್ಲಿ ನಡೆದಿದೆ.

ಬಾಗಲಕೋಟೆ ಮೂಲದ ಪ್ರವೀಣ್(25) ಮೃತ ದುರ್ದೈವಿಯಾಗಿದ್ದು, ಕಳೆದ ಒಂದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು.
ವಿದ್ಯುತ್ ಲೈನ್ ದುರಸ್ತಿ ಮಾಡಲು ಕಂಬ ಹತ್ತಿ ಫ್ಯೂಸ್ ಸರಿಮಾಡುತ್ತಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ʼನಿಂದ ಕರೆಂಟ್ ಪಾಸ್ ಆಗಿ ಕಂಬದಿಂದ ನೆಲಕ್ಕೆ ಬಿದ್ದು ಒದ್ದಾಡುತ್ತಿದ್ದ ವೇಳೆ ಸ್ಥಳೀಯರು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯ ಸಾವನ್ನಪ್ಪಿದ್ದಾರೆ.
ಪ್ರಕರಣ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.