ಚಿಕ್ಕಮಗಳೂರು: ಐದು ದಿನದ ಹಿಂದೆ ನಾಪತ್ತೆಯಾಗಿದ್ದ ಚಿಕ್ಕಮಗಳೂರು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ರಕ್ಷಿತ್ ನಗರದ ಪವಿತ್ರವನದ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಹೌದು .. ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದ ಶೇಖರ್ ಅವರ ಪುತ್ರನಾಗಿದ್ದು ಈತ ಚಿಕ್ಕಮಗಳೂರಿನ ಸಿಐಎಂಎಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಎಸ್ಸಿ. ನರ್ಸಿಂಗ್ (ಎಎಚ್ಎಸ್) ವ್ಯಾಸಂಗ ಮಾಡುತ್ತಿದ್ದು, ಹೌಸಿಂಗ್ ಬೋರ್ಡ್ನ ಸರ್ಕಾರಿ ವೃತ್ತಿಪರ ಕಾಲೇಜಿನ ಬಾಲಕರ ವಸತಿ ನಿಲಯದಲ್ಲಿ ವಾಸವಾಗಿದ್ದನು.
ನವೆಂಬರ್ 7ರಂದು ಮಧ್ಯಾಹ್ನ 12.34ರ ಸುಮಾರಿಗೆ ಹಾಸ್ಟೆಲ್ನಿಂದ ನಾಪತ್ತೆಯಾಗಿದ್ದು ಇಂದು ಪವಿತ್ರವನದ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.ವಿದ್ಯಾರ್ಥಿ ರಕ್ಷಿತ್ ಸಾವಿಗೆ ಇನ್ನೂ ನಿಖರವಾದ ಕಾರಣ ತಿಳಿದುಬಂದಿಲ್ಲ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಹಂತದ ಕ್ರಮ ಕೈಗೊಂಡಿದ್ದಾರೆ. ತನಿಖೆ ಬಳಿಕ ಇದೊಂದು ಕೊಲೆಯೋ ಅಥವಾ ಆತ್ಮಹತ್ಯೆಯೋ ತಿಳಿದುಬರಲಿದೆ.
