Monday, August 10, 2026
Homeಜಿಲ್ಲಾಸುದ್ದಿಇಂಧನ ನಿಗಮದ ಅಧ್ಯಕ್ಷರಾಗಿ ಶಾಸಕ ಟಿ.ಡಿ.ರಾಜೇಗೌಡ ಮುಂದುವರಿಕೆ

ಇಂಧನ ನಿಗಮದ ಅಧ್ಯಕ್ಷರಾಗಿ ಶಾಸಕ ಟಿ.ಡಿ.ರಾಜೇಗೌಡ ಮುಂದುವರಿಕೆ

Telegram Group
Join Now

ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಶಾಸಕ ಟಿ.ಡಿ. ರಾಜೇಗೌಡ ಅವರನ್ನು ಮುಂದುವರೆಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

ಟಿ.ಡಿ. ರಾಜೇಗೌಡ ಅವರನ್ನು 2024ರ ಜನವರಿ 26ರಿಂದ ಎರಡುವರೆ ವರ್ಷಗಳ ಅವಧಿಗೆ ಕರ್ನಾಟಕ ರಾಜ್ಯ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಿಸಲಾಗಿತ್ತು. 2026 ಜನವರಿ 26 ರಂದು ಅವಧಿ ಪೂರ್ಣಗೊಂಡಿತ್ತು. 2026ರ ಜನವರಿ 28ರಂದು ಪುನಃ ಆದೇಶ ಹೊರಡಿಸಿರುವ ಸರ್ಕಾರ, ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡಿ, ಮುಂದಿನ ಆದೇಶದವರೆಗೆ ಮುಂದುವರೆಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಜಿಲ್ಲಾ ಪಂಚಾಯತಿ ಸದಸ್ಯರಾಗಿ, ಜಿ.ಪಂ.ಅಧ್ಯಕ್ಷರಾಗಿ ಶೃಂಗೇರಿ ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮಕ್ಕೆ ಎರಡನೇ ಬಾರಿ ಅಧ್ಯಕ್ಷರಾಗಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments