Monday, February 9, 2026
Homeಜಿಲ್ಲಾಸುದ್ದಿಶೃಂಗೇರಿಯಿಂದ ಆಗುಂಬೆ ಹೋಗುವ ಮುಖ್ಯರಸ್ತೆಗೆ ಶಾಸಕರಿಂದ ಗುದ್ದಲಿ ಪೂಜೆ

ಶೃಂಗೇರಿಯಿಂದ ಆಗುಂಬೆ ಹೋಗುವ ಮುಖ್ಯರಸ್ತೆಗೆ ಶಾಸಕರಿಂದ ಗುದ್ದಲಿ ಪೂಜೆ

ಶೃಂಗೇರಿ: ತಾಲೂಕಿನ ಬೇಗಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಶೃಂಗೇರಿಯಿಂದ ಆಗುಂಬೆ ಹೋಗುವ ಮುಖ್ಯ ರಸ್ತೆಗೆ ಲೋಕೋಪಯೋಗಿ ಇಲಾಖೆಯ (ORF) ಯೋಜನೆಯಡಿ ( 3 ಕೋಟಿ 65 ಲಕ್ಷ ರೂ) ವೆಚ್ಚದಲ್ಲಿ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶಾಸಕರಾದ
ಟಿ ಡಿ ರಾಜೇಗೌಡರು ನೆರವೇರಿಸಿದರು.

ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರಾದ ಟಿಡಿ ರಾಜೇಗೌಡರು ಮುಂದೆ ಗ್ರಾಮ ಪಂಚಾಯತಿ ಕಟ್ಟಡಕ್ಕೆ ಸುಮಾರು 20 ಲಕ್ಷ ರೂ ಅನುದಾನ ನೀಡುವುದಾಗಿ ಭರವಸೆ ನೀಡಿದರು.

ಹಾಗೆ ಬೇಗಾರು ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ನಡೆಯುವ ಕಾಮಗಾರಿಗಳಿಗೆ ಸಹಕಾರ ನೀಡುವುದಾಗಿ ತಿಳಿಸಿದರು.

ಈ ಸಂಧರ್ಭದಲ್ಲಿ ಶೃಂಗೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಭಟ್, ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ದಿನೇಶ್ ಹೆಗ್ಡೆ ಹಾಗೂ ಬೇಗಾರು ಗ್ರಾಮ ಪಂಚಾಯತಿ ಅಧ್ಯಕ್ಷರು ಸದಸ್ಯರು. ಪಕ್ಷದ ಮುಖಂಡರು, ಗ್ರಾಮಸ್ಥರು ಇದ್ದರು.

ವರದಿ: ಶಶಿ ಬೆತ್ತದಕೊಳಲು

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!