Tuesday, August 11, 2026
Homeಕ್ರೈಮ್ಮೂಡಿಗೆರೆ: ನಿಗದಿತ ಬೆಲೆಗಿಂತ ಹೆಚ್ಚು ಹಣ ವಸೂಲಿ: ತಂಬಾಕು ಪ್ರಿಯರಿಂದ ಗಂಭೀರ ಆರೋಪ

ಮೂಡಿಗೆರೆ: ನಿಗದಿತ ಬೆಲೆಗಿಂತ ಹೆಚ್ಚು ಹಣ ವಸೂಲಿ: ತಂಬಾಕು ಪ್ರಿಯರಿಂದ ಗಂಭೀರ ಆರೋಪ

Telegram Group
Join Now

ಮೂಡಿಗೆರೆ: ITC ಕಂಪನಿಯ ಕಿಂಗ್ ಸಿಗರೇಟ್ ಪ್ಯಾಕ್ ಮೇಲೆ ಮುದ್ರಿತ ಗರಿಷ್ಠ ಚಿಲ್ಲರೆ ಬೆಲೆ (MRP) ರೂ 170 ಇದ್ದರು, ಹಲವು ಚಿಲ್ಲರೆ ಅಂಗಡಿಗಳಲ್ಲಿ ಅದೇ ಪ್ಯಾಕ್ ಅನ್ನು ರೂ 230ರಿಂದ ರೂ 250ರವರೆಗೆ ಮಾರಾಟ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬರುತ್ತಿವೆ.

ಒಂದು ಪ್ಯಾಕ್‌ ನಲ್ಲಿರುವ ಸಿಗರೇಟ್‌ ಗಳನ್ನು ಪ್ರತ್ಯೇಕವಾಗಿ ಮಾರಾಟ ಮಾಡುವ ಸಂದರ್ಭಗಳಲ್ಲಿ ಪ್ರತಿ ಕಿಂಗ್ ಸಿಗರೇಟ್‌ಗೆ ₹25ವರೆಗೆ ಹಣ ವಸೂಲಿ ಮಾಡಲಾಗುತ್ತಿದೆ. ಎಂಆರ್‌ಪಿ ಲೆಕ್ಕಾಚಾರ ಪ್ರಕಾರ ಪ್ರತಿ ಸಿಗರೇಟ್‌ಗೆ ಸುಮಾರು ₹17 ಮಾತ್ರ ಆಗಬೇಕಾದರೂ, ಅದಕ್ಕಿಂತ ಹೆಚ್ಚಿನ ದರ ವಸೂಲಿ ಮಾಡುತ್ತಿರುವುದು ಗ್ರಾಹಕ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಲೆ ಕುರಿತು ಪ್ರಶ್ನಿಸಿದಾಗ ಕೆಲ ಅಂಗಡಿದಾರರು ಸ್ಪಷ್ಟ ಉತ್ತರ ನೀಡದೆ, ತಮ್ಮದೇ ದರ ನಿಗದಿ ಮಾಡಿಕೊಂಡು ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪಗಳಿವೆ. ಇನ್ನೂ ಕೆಲ ವ್ಯಾಪಾರಿಗಳು, “ಸಿಗರೇಟ್ ಮಾರಾಟ ಪ್ರತಿನಿಧಿಗಳು ನಮಗೆ ಹೆಚ್ಚಿನ ದರಕ್ಕೆ ಸರಕು ನೀಡುತ್ತಾರೆ. ಅದಕ್ಕಾಗಿ ಹೆಚ್ಚಾಗಿ ಮಾರಾಟ ಮಾಡಬೇಕಾಗುತ್ತದೆ” ಎಂದು ಕಾರಣ ನೀಡುತ್ತಿರುವುದು ಗಮನಾರ್ಹವಾಗಿದೆ.

ಗ್ರಾಹಕ ಹಕ್ಕು ಕಾಯ್ದೆ ಪ್ರಕಾರ ಎಂಆರ್‌ಪಿಗಿಂತ ಹೆಚ್ಚಿನ ದರಕ್ಕೆ ವಸ್ತು ಮಾರಾಟ ಮಾಡುವುದು ಕಾನೂನುಬಾಹಿರವಾಗಿದ್ದು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹಾಗೂ ಗ್ರಾಹಕ ಸಂರಕ್ಷಣಾ ಅಧಿಕಾರಿಗಳು ಇಂತಹ ಪ್ರಕರಣಗಳಲ್ಲಿ ಕಠಿಣ ಕ್ರಮ ಕೈಗೊಳ್ಳುವ ಅವಕಾಶವಿದೆ.

ಅಕ್ರಮ ದರ ವಸೂಲಿನ ವಿರುದ್ಧ ತಕ್ಷಣ ತಪಾಸಣೆ ನಡೆಸಿ, ತಪ್ಪಿತಸ್ಥ ಅಂಗಡಿದಾರರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಎಂಆರ್‌ಪಿ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಮೂಲಕ ಗ್ರಾಹಕರಿಗೆ ನ್ಯಾಯ ಒದಗಿಸಬೇಕೆಂಬುದು ಸಾರ್ವಜನಿಕರ ಪ್ರಮುಖ ಬೇಡಿಕೆಯಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments