Tuesday, July 21, 2026
Homeಜಿಲ್ಲಾಸುದ್ದಿಮೂಡಿಗೆರೆ: JS ಶಾಲೆಯಲ್ಲಿ ಅರ್ಥಪೂರ್ಣ ವಿಶ್ವ ಪರಿಸರ ದಿನಾಚರಣೆ: ವಿದ್ಯಾರ್ಥಿಗಳಿಂದ ಪರಿಸರ ಜಾಗೃತಿ ಅಭಿಯಾನ

ಮೂಡಿಗೆರೆ: JS ಶಾಲೆಯಲ್ಲಿ ಅರ್ಥಪೂರ್ಣ ವಿಶ್ವ ಪರಿಸರ ದಿನಾಚರಣೆ: ವಿದ್ಯಾರ್ಥಿಗಳಿಂದ ಪರಿಸರ ಜಾಗೃತಿ ಅಭಿಯಾನ

Telegram Group
Join Now

ಮೂಡಿಗೆರೆ : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಜೆ.ಎಸ್. ಶಾಲೆಯ ವತಿಯಿಂದ ಶುಕ್ರವಾರ ವಿದ್ಯಾರ್ಥಿಗಳಿಂದ ಪರಿಸರ ಜಾಗೃತಿ ರ‍್ಯಾಲಿ ಹಾಗೂ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಶಾಲಾ ಆವರಣದಿಂದ ಆರಂಭವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ, ಗಿಡ ನೆಡುವ ಮಹತ್ವ, ಸ್ವಚ್ಛತೆ ಕಾಪಾಡುವ ಅಗತ್ಯತೆ ಹಾಗೂ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವ ಕುರಿತು ಘೋಷಣೆಗಳನ್ನು ಕೂಗುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ಬಳಿಕ ಶಾಲಾ ಆವರಣದಲ್ಲಿ ವಿವಿಧ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ಸಾರಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನ್ಯಾಯಾಧೀಶರಾದ ಶ್ರೀ ರಿಜ್ವಾನ್ ಅಲಿ, ನಿವೃತ್ತ ಸಿ.ಆರ್.ಪಿ. ಶ್ರೀ ಜನಪ್ಪ, ಡಿ.ವೈ.ಎಫ್. ಅಶ್ವಥ್ ಹಾಗೂ ಜೆ.ಎಸ್. ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಇಮ್ರಾನ್ ಭಾಗವಹಿಸಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ವಿದ್ಯಾರ್ಥಿಗಳು ಬಾಲ್ಯದಿಂದಲೇ ಪರಿಸರದ ಬಗ್ಗೆ ಕಾಳಜಿ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ವಿಶ್ವ ಪರಿಸರ ದಿನದ ಅಂಗವಾಗಿ ನಡೆದ ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಹಾಗೂ ಪ್ರಕೃತಿ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸುವಲ್ಲಿ ಯಶಸ್ವಿಯಾಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments