Wednesday, July 1, 2026
Homeಜಿಲ್ಲಾಸುದ್ದಿಮುಡಾ ಪ್ರಕರಣ : ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯಗೆ ಹಿನ್ನಡೆ - ರಾಜೀನಾಮೆಗೆ ಆಗ್ರಹಿಸಿ ಸಕಲೇಶಪುರದಲ್ಲಿ ಪ್ರತಿಭಟನೆ

ಮುಡಾ ಪ್ರಕರಣ : ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯಗೆ ಹಿನ್ನಡೆ – ರಾಜೀನಾಮೆಗೆ ಆಗ್ರಹಿಸಿ ಸಕಲೇಶಪುರದಲ್ಲಿ ಪ್ರತಿಭಟನೆ

Telegram Group
Join Now

ಸಕಲೇಶಪುರ : ಮುಖ್ಯಮಂತ್ರಿ ವಿರುದ್ಧ ತನಿಖೆಗೆ ರಾಜ್ಯಪಾಲರು ನೀಡಿರುವ ಅನುಮತಿ ಆದೇಶವನ್ನು ಹೈಕೋರ್ಟ್‌ ಎತ್ತಿ ಹಿಡಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ ಹೆಚ್ಚಾಗುತ್ತಿದೆ. ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಿ ರಾಜೀನಾಮೆಗೆ ಒತ್ತಾಯಿಸಿದೆ.
ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಸಿಮೆಂಟ್ ಮಂಜು ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ನಗರದ ಹಳೆ ಬಸ್ ನಿಲ್ದಾಣ ಬಳಿ ಪ್ರತಿಭಟನೆ ನಡೆಸಿದ ಮುಖಂಡರು ಹಾಗೂ ಕಾರ್ಯಕರ್ತರು ಸರ್ಕಾರ ಹಾಗೂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಹೈಕೋರ್ಟ್‌ ತೀರ್ಪು ಬಂದಿದ್ದು, ಸಿದ್ದರಾಮಯ್ಯಗೆ ಬಹಳ ಹಿನ್ನಡೆಯಾಗಿದೆ. ಒಂದು ಕ್ಷಣ ಕೂಡಾ ಸಿಎಂ ಕುರ್ಚಿಯಲ್ಲಿ ಕೂರಲು ಸಿದ್ದರಾಮಯ್ಯಗೆ ಅರ್ಹತೆ ಇಲ್ಲ. ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments