Saturday, February 7, 2026
Homeಕ್ರೈಮ್ಮೂಡಿಗೆರೆ: ಜಾತಕ ಹೇಳುವ ನೆಪದಲ್ಲಿ ಅರ್ಚಕನಿಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ!

ಮೂಡಿಗೆರೆ: ಜಾತಕ ಹೇಳುವ ನೆಪದಲ್ಲಿ ಅರ್ಚಕನಿಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ!

ಮೂಡಿಗೆರೆ: ಮದುವೆ ಜಾತಕ ತೋರಿಸುವ ನೆಪದಲ್ಲಿ ದಲಿತ ಸಮುದಾಯದ ಯುವತಿಗೆ ದೇವಾಲಯದ ಅರ್ಚಕ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನಲ್ಲಿ ಬೆಳಕಿಗೆ ಬಂದಿದೆ.

ಹೊರಟ್ಟಿ ಗ್ರಾಮದ ಪಾರ್ವತಿ ಈಶ್ವರ ದೇವಸ್ಥಾನದ ಅರ್ಚಕ ಕೃಷ್ಣ ರಾವ್ ವಿರುದ್ಧ ಬಣಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 23 ವರ್ಷದ ದಲಿತ ಸಮುದಾಯದ ಯುವತಿ ನೀಡಿರುವ ದೂರಿನ ಪ್ರಕಾರ, ಮದುವೆಯಲ್ಲಿ ತೊಂದರೆ ಆಗುತ್ತದೆ ಎಂದು ಹೆದರಿಸಿ ಆರೋಪಿ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ.

2025ರ ನವೆಂಬರ್ 23ರಿಂದ 2026ರ ಫೆಬ್ರವರಿ 2ರವರೆಗೆ ಹಲವು ಬಾರಿ ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ಫೆಬ್ರವರಿ 2, 2026ರಂದು ಮಧ್ಯಾಹ್ನ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 64(2)(m) ಹಾಗೂ ಎಸ್‌ಸಿ/ಎಸ್‌ಟಿ (ಅತ್ಯಾಚಾರ ತಡೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!