Tuesday, March 31, 2026
Homeಕ್ರೈಮ್ಮೂಡಿಗೆರೆ: ಅಕ್ರಮ ಲವ್ ಜಿಹಾದ್, ಅಕ್ರಮ ಗೋ ಕಳ್ಳತನ ಖಂಡಿಸಿ ತಹಸೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ...

ಮೂಡಿಗೆರೆ: ಅಕ್ರಮ ಲವ್ ಜಿಹಾದ್, ಅಕ್ರಮ ಗೋ ಕಳ್ಳತನ ಖಂಡಿಸಿ ತಹಸೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಕೆ!

ಮೂಡಿಗೆರೆ: ಅಕ್ರಮ ಲವ್ ಜಿಹಾದ್, ಅಕ್ರಮ ಗೋ ಕಳ್ಳತನ ಹಾಗೂ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತೀವ್ರವಾಗಿ ಖಂಡಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರು ಸೋಮವಾರ ಮೂಡಿಗೆರೆ ಪಟ್ಟಣದಲ್ಲಿ ಉಗ್ರ ಪ್ರತಿಭಟನೆ ನಡೆಸಿದರು.

ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ಹೊರಹಾಕಿದರು. ಬಳಿಕ ತಹಸೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಮೂಡಿಗೆರೆ ತಾಲೂಕಿನ ಎಲ್ಲಾ ಹೋಬಳಿಗಳ ಮುಖಂಡರುಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿ ಏಕತಾ ಪ್ರದರ್ಶಿಸಿದರು. ಬಿಜೆಪಿ, ವಿಶ್ವ ಹಿಂದೂ ಪರಿಷತ್, ಬಜರಂಗದಳ ಸೇರಿದಂತೆ ವಿವಿಧ ಸಂಘಟನೆಗಳ ಎಲ್ಲಾ ಮುಖಂಡರುಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!