Thursday, March 26, 2026
Homeಜಿಲ್ಲಾಸುದ್ದಿಮೂಡಿಗೆರೆ: ಕ್ಷೇತ್ರದ ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಆರ್ಯ ಪಟೇಲ್ ಕಡಿದಾಳು ನೇಮಕ

ಮೂಡಿಗೆರೆ: ಕ್ಷೇತ್ರದ ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಆರ್ಯ ಪಟೇಲ್ ಕಡಿದಾಳು ನೇಮಕ

ಮೂಡಿಗೆರೆ: ಯುವ ಕಾಂಗ್ರೆಸ್ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸ್ಥಾನಕ್ಕೆ ಆರ್ಯ ಪಟೇಲ್ ಕಡಿದಾಳು ಆಯ್ಕೆಯಾಗಿದ್ದಾರೆ.

ತಾಲೂಕು ಶಾಸಕರ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಯುವ ಕಾಂಗ್ರೆಸ್ ಅಧ್ಯಕ್ಷರನ್ನು ಜನಪ್ರಿಯ ಶಾಸಕಿ ಶ್ರೀಮತಿ ನಯನ ಮೋಟಮ್ಮ ಪ್ರಕಟಿಸಿದರು. ನೂತನ ಪದಾಧಿಕಾರಿಗಳಿಗೆ ಕಿವಿಮಾತು ಹೇಳಿದರು. ಯಾವುದೇ ಗುಂಪುಗಾರಿಕೆ ಮಾಡದೆ, ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ, ಕಾಂಗ್ರೆಸ್ ಪಕ್ಷದ ಸಿದ್ಧಾಂತ ನಂಬಿ ಪಕ್ಷದ ಸದಸ್ಯತ್ವ ಪಡೆದಿರುವ ಎಲ್ಲರನ್ನು ಸೇರಿಸಿಕೊಂಡು ಪಕ್ಷವನ್ನು ಪ್ರಬಲ ಗೊಳಿಸಬೇಕೆಂದು ತಿಳಿಸಿದರು.

ನೂತನ ಅಧ್ಯಕ್ಷರಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೂಡಿಗೆರೆ ವಿಧಾನಸಭಾ ಕ್ಷೇತ್ರದ ನೂತನ ಯುವ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನನ್ನನ್ನು ಆಯ್ಕೆ ಮಾಡಲಾಗಿದೆ ಇದು ಅಧಿಕಾರ ಅಲ್ಲ ಒಂದು ಜವಾಬ್ದಾರಿ ಎಂದು ಭಾವಿಸಿ ಪದಾಧಿಕಾರಿಗಳೊಂದಿಗೆ ವಿಶ್ವಾಸದೊಂದಿಗೆ ಶಾಸಕರ ಹಿರಿಯರ ಮಾರ್ಗದರ್ಶನದಲ್ಲಿ ಪಕ್ಷದ ಬೆಳವಣಿಗೆಗೆ ದುಡಿಯುವುದಾಗಿ ಹೇಳಿದರು.

ಇಲ್ಲಿಯವರೆಗೂ ನಮ್ಮ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರು ಬಹಳ ಜವಾಬ್ದಾರಿಯಿಂದ ಸಂಘಟನೆ ಮಾಡಿದ್ದೂ ಅವರಿಗೆ ಅಭಿನಂದನೆ ತಿಳಿಸಿದರು.

ಮುಂದಿನ ದಿನಗಳಲ್ಲಿ ಪಕ್ಷದ ಬೆಳವಣಿಗೆಗೆ ಯುವ ಸಮೂಹವನ್ನು ಕಟ್ಟಿ, ಹಲವು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಭಾರತೀಯ ಕಾಂಗ್ರೆಸ್ ಪಕ್ಷದ ತಾಲ್ಲೂಕು ಹಾಗೂ ಹೋಬಳಿ ಘಟಕದ ಅಧ್ಯಕ್ಷರು ಪದಾಧಿಕಾರಿಗಳು ಸದಸ್ಯರು, ನೂತನ ಪದಾಧಿಕಾರಿಗಳು ಕಾರ್ಯಕರ್ತರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು

ವರದಿ:ಪುನೀತ್ ಕಡಿದಾಳು

9483811948

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!