Tuesday, February 10, 2026
Homeಜಿಲ್ಲಾಸುದ್ದಿಮೂಡಿಗೆರೆ: ತಾಲೂಕು ಬಿಜೆಪಿ ಕಚೇರಿಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ

ಮೂಡಿಗೆರೆ: ತಾಲೂಕು ಬಿಜೆಪಿ ಕಚೇರಿಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ

ಮೂಡಿಗೆರೆ: ಭಾರತದ ಮಾಜಿ ಪ್ರಧಾನಮಂತ್ರಿ, ಶ್ರೇಷ್ಠವಾಗ್ಮಿ, ಕವಿ, ಬಿಜೆಪಿ ನೇತಾರ ಅಜಾತಶತ್ರು ಅಟಲ್​ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಾಲೂಕು ಬಿಜೆಪಿ ಅಧ್ಯಕ್ಷ ಗಜೇಂದ್ರ ತರುವೆ, ಅಟಲ್ ಬಿಹಾರಿ ವಾಜಪೇಯಿ ಅವರು ತಮ್ಮ ಸಭ್ಯತೆ, ಹಾಸ್ಯಪ್ರಜ್ಞೆ, ಉದಾರ ವ್ಯಕ್ತಿತ್ವ ಮತ್ತು ನಡವಳಿಕೆಗಳಿಂದ ಅತ್ಯಂತ ಜನಪ್ರಿಯ ನಾಯಕರಾಗಿದ್ದರು ಎಂದರು.

ವಾಜಪೇಯಿ ಮಧ್ಯ ಪ್ರದೇಶದ ಗ್ವಾಲಿಯರ್ ಹತ್ತಿರದ ಶಿಂದೆ ಕಿ ಚವ್ವಾಣಿ ಎಂಬ ಗ್ರಾಮದಲ್ಲಿ 1924ರ ಡಿಸೆಂಬರ್ 25ರಂದು ಕೃಷ್ಣದೇವಿ ಹಾಗೂ ಕೃಷ್ಣ ಬಿಹಾರಿ ವಾಜಪೇಯಿ ಅವರ ಮಗನಾಗಿ ಜನಿಸಿದರು.

ದೇಶದ ಅಭಿವೃದ್ಧಿಗೆ ವಾಜಪೇಯಿ ನೀಡಿದ ಕೊಡುಗೆಯನ್ನು ಸ್ಮರಿಸಲು 2014ರಲ್ಲಿ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಸರ್ಕಾರ ಅವರ ಜನ್ಮದಿನವನ್ನು ಉತ್ತಮ ಆಡಳಿತ ದಿನವನ್ನಾಗಿ ಆಚರಿಸಲು ನಿರ್ಧರಿಸಿತ್ತು.
ಅಂದಿನಿಂದ ಪ್ರತಿ ವರ್ಷ ಡಿಸೆಂಬರ್ 25ನ್ನು ‘ಉತ್ತಮ ಆಡಳಿತ ದಿನ’ವನ್ನಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು

ತಾಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ತಾರೇಶ್ ಜೇನುಬೈಲ್ ಮಾತನಾಡಿ, ಕ್ರಿಸ್‌ಮಸ್ ದಿನದಂದು ವಾಜಪೇಯಿ ಅವರ ಹುಟ್ಟುಹಬ್ಬ ಇರುವುದು ವಿಶೇಷ.ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದರೂ ಮಾಂಸಾಹಾರವನ್ನು ಇಷ್ಟಪಡುತ್ತಿದ್ದರು. ಸೀಗಡಿ ಅವರ ನೆಚ್ಚಿನ ಆಹಾರ ಪದಾರ್ಥವಾಗಿತ್ತು.

ಚಿಕ್ಕಂದಿನಿಂದಲೂ ಕಾವ್ಯದ ಮೇಲೆ ಒಲವು ಹೊಂದಿದ್ದ ಅವರು, 10ನೇ ತರಗತಿಯಲ್ಲಿದ್ದಾಗ ತಮ್ಮ ಮೊದಲ ಕವಿತೆಯನ್ನು ಬರೆದಿದ್ದರು.ಇಂದಿನ ಯುವ ಪೀಳಿಗೆಗೆ ವಾಜಪೇಯಿ ಅವರ ನಡತೆ ತತ್ವ ಸಿದ್ದಾಂತ ಮಾದರಿ ಎಂದರು

SC ಯುವ ಮೋರ್ಚಾ ಅಧ್ಯಕ್ಷ ಸಚಿನ್ ಬಾನಹಳ್ಳಿ ಮಾತನಾಡಿ ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಭಾಗವಹಿಸಿದ್ದಕ್ಕಾಗಿ 23 ದಿನಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದರು.

ಆಜಾತಶತ್ರು ಎಂದೇ ಖ್ಯಾತರಾದ ಇವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಹಿಂದಿಯಲ್ಲಿ ಭಾಷಣ ಮಾಡಿದ ಮೊದಲ ಭಾರತೀಯ ರಾಜಕಾರಣಿ ಆಗಿದ್ದರು. 47 ವರ್ಷಗಳ ಕಾಲ ಸಂಸತ್ ಸದಸ್ಯರಾಗಿದ್ದ ಹಿರಿಮೆ ಅವರದ್ದು.
3 ಬಾರಿ ಪ್ರಧಾನ ಮಂತ್ರಿಯಾಗಿ, 11 ಬಾರಿ ಲೋಕಸಭೆ ಹಾಗೂ 2 ಬಾರಿ ರಾಜ್ಯಸಭೆ ಸದಸ್ಯರಾಗಿ ಸೇವೆ ಸಲ್ಲಿಸಿದ್ದು ಭಾರತದ ಇತಿಹಾಸ ಎಂದರು

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಪ್ರವೀಣ್ ಮಗ್ಗಲಮಕ್ಕಿ, ಪ್ರಶಾಂತ್ ಬಿಳಗುಳ, ಕಸಬಾ ಹೋಬಳಿ ಅಧ್ಯಕ್ಷ ಸಂದೀಪ್ ಕೇಲ್ಲೂರ್, ಕಾರ್ಯಕರ್ತರಾದ ಶ್ರೇಷ್ಟಿ, ಶರತ್ ಘಟ್ಟದಹಳ್ಳಿ ಮತ್ತಿತರು ಇದ್ದರು

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!