Monday, March 9, 2026
Homeಜಿಲ್ಲಾಸುದ್ದಿಮೂಡಿಗೆರೆ: ಬಾನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ರಾಜ್ಯ ಮಟ್ಟದ ಅತ್ಯುತ್ತಮ ಎಸ್‌ಡಿಎಂಸಿ ಪುಷ್ಟಿ ಪ್ರಶಸ್ತಿ

ಮೂಡಿಗೆರೆ: ಬಾನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ರಾಜ್ಯ ಮಟ್ಟದ ಅತ್ಯುತ್ತಮ ಎಸ್‌ಡಿಎಂಸಿ ಪುಷ್ಟಿ ಪ್ರಶಸ್ತಿ

ಮೂಡಿಗೆರೆ: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ ರಾಜ್ಯ ಮಟ್ಟದ ಆಯ್ಕೆ – ತಾಲ್ಲೂಕಿಗೆ ಹೆಮ್ಮೆ
ಕೊಟ್ಟಿಗೆಹಾರ ಬಣಕಲ್ ಸಮೀಪದ ಬಾನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ರಾಜ್ಯ ಮಟ್ಟದ ಅತ್ಯುತ್ತಮ ಎಸ್‌ಡಿಎಂಸಿ ಪುಷ್ಟಿ ಶಾಲೆಯಾಗಿ ಆಯ್ಕೆಯಾಗಿದೆ.

ಇದೇ ವೇಳೆ ಶಾಲೆಯ ಶಿಕ್ಷಕಿ ಇಂಪಾ ಸವಿನ್ ಅವರಿಗೆ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯಿಂದ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಲಭಿಸಿರುವುದು ತಾಲ್ಲೂಕಿಗೆ ಹೆಮ್ಮೆಯ ಸಂಗತಿಯಾಗಿದೆ.

ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ತಾಲ್ಲೂಕು ಅಧ್ಯಕ್ಷ ಆರ್. ಪ್ರಕಾಶ್ ಈ ಕುರಿತು ಮಾಹಿತಿ ನೀಡಿ ಮಾತನಾಡಿ, ಎಸ್‌ಡಿಎಂಸಿ ಪುಷ್ಟಿ ಕಾರ್ಯಕ್ರಮಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಒಟ್ಟು ಒಂಬತ್ತು ಶಾಲೆಗಳು ಪುಷ್ಟಿ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದು, ಅವುಗಳಲ್ಲಿ ಬಾನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯೂ ಒಂದಾಗಿದೆ ಎಂದರು.

ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಮೂರು ವಿಭಿನ್ನ ಸಮಿತಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ರಾಜ್ಯ ಮಟ್ಟಕ್ಕೆ ವರದಿ ಸಲ್ಲಿಸಿದ್ದವು. ಅದರ ಆಧಾರದ ಮೇಲೆ ಈ ಬಾರಿ ಬಾನಹಳ್ಳಿ ಶಾಲೆ ಅತ್ಯುತ್ತಮ ಎಸ್‌ಡಿಎಂಸಿ ಪುಷ್ಟಿ ಶಾಲೆಯಾಗಿ ಆಯ್ಕೆಯಾಗಿದೆ ಎಂದು ಹೇಳಿದರು.

ಶಾಲಾ ಸಮಿತಿಯ ಅಧ್ಯಕ್ಷ ದಿನೇಂದ್ರ ಮಾತನಾಡಿ, ಶಾಲೆಯ ಸಮಿತಿ ಸದಸ್ಯರು ಹಾಗೂ ಪೋಷಕರು ಒಗ್ಗಟ್ಟಿನಿಂದ ಶಾಲೆಯ ಅಭಿವೃದ್ಧಿಗಾಗಿ ಶ್ರಮಿಸಿರುವುದರಿಂದ ಈ ಪ್ರಶಸ್ತಿ ದೊರೆತಿದೆ. ಶಾಲೆಯ ಶಿಕ್ಷಕ ವೃಂದ ಹಾಗೂ ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಲೆಯ ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಆರ್. ಶ್ರೀಧರ್, ಮಾಜಿ ಉಪಾಧ್ಯಕ್ಷೆ ಅಮಿತಾ, ಪ್ರಸ್ತುತ ಉಪಾಧ್ಯಕ್ಷೆ ತೇಜಸ್ವಿನಿ ಪ್ರಸಾದ್, ಸವಿನ್ ಕುಮಾರ್, ರವಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಬಾನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ರಾಜ್ಯ ಮಟ್ಟದ ಅತ್ಯುತ್ತಮ ಎಸ್‌ಡಿಎಂಸಿ ಪುಷ್ಟಿ ಪ್ರಶಸ್ತಿ

ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ ರಾಜ್ಯ ಮಟ್ಟದ ಆಯ್ಕೆ – ತಾಲ್ಲೂಕಿಗೆ ಹೆಮ್ಮೆ
ಕೊಟ್ಟಿಗೆಹಾರ ಬಣಕಲ್ ಸಮೀಪದ ಬಾನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ರಾಜ್ಯ ಮಟ್ಟದ ಅತ್ಯುತ್ತಮ ಎಸ್‌ಡಿಎಂಸಿ ಪುಷ್ಟಿ ಶಾಲೆಯಾಗಿ ಆಯ್ಕೆಯಾಗಿದೆ.

ಇದೇ ವೇಳೆ ಶಾಲೆಯ ಶಿಕ್ಷಕಿ ಇಂಪಾ ಸವಿನ್ ಅವರಿಗೆ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯಿಂದ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಲಭಿಸಿರುವುದು ತಾಲ್ಲೂಕಿಗೆ ಹೆಮ್ಮೆಯ ಸಂಗತಿಯಾಗಿದೆ.
ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ತಾಲ್ಲೂಕು ಅಧ್ಯಕ್ಷ ಆರ್. ಪ್ರಕಾಶ್ ಈ ಕುರಿತು ಮಾಹಿತಿ ನೀಡಿ ಮಾತನಾಡಿ, ಎಸ್‌ಡಿಎಂಸಿ ಪುಷ್ಟಿ ಕಾರ್ಯಕ್ರಮಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಒಟ್ಟು ಒಂಬತ್ತು ಶಾಲೆಗಳು ಪುಷ್ಟಿ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದು, ಅವುಗಳಲ್ಲಿ ಬಾನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯೂ ಒಂದಾಗಿದೆ ಎಂದರು.

ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಮೂರು ವಿಭಿನ್ನ ಸಮಿತಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ರಾಜ್ಯ ಮಟ್ಟಕ್ಕೆ ವರದಿ ಸಲ್ಲಿಸಿದ್ದವು. ಅದರ ಆಧಾರದ ಮೇಲೆ ಈ ಬಾರಿ ಬಾನಹಳ್ಳಿ ಶಾಲೆ ಅತ್ಯುತ್ತಮ ಎಸ್‌ಡಿಎಂಸಿ ಪುಷ್ಟಿ ಶಾಲೆಯಾಗಿ ಆಯ್ಕೆಯಾಗಿದೆ ಎಂದು ಹೇಳಿದರು.

ಶಾಲಾ ಸಮಿತಿಯ ಅಧ್ಯಕ್ಷ ದಿನೇಂದ್ರ ಮಾತನಾಡಿ, ಶಾಲೆಯ ಸಮಿತಿ ಸದಸ್ಯರು ಹಾಗೂ ಪೋಷಕರು ಒಗ್ಗಟ್ಟಿನಿಂದ ಶಾಲೆಯ ಅಭಿವೃದ್ಧಿಗಾಗಿ ಶ್ರಮಿಸಿರುವುದರಿಂದ ಈ ಪ್ರಶಸ್ತಿ ದೊರೆತಿದೆ. ಶಾಲೆಯ ಶಿಕ್ಷಕ ವೃಂದ ಹಾಗೂ ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಲೆಯ ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಆರ್. ಶ್ರೀಧರ್, ಮಾಜಿ ಉಪಾಧ್ಯಕ್ಷೆ ಅಮಿತಾ, ಪ್ರಸ್ತುತ ಉಪಾಧ್ಯಕ್ಷೆ ತೇಜಸ್ವಿನಿ ಪ್ರಸಾದ್, ಸವಿನ್ ಕುಮಾರ್, ರವಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!