ಮೂಡಿಗೆರೆ: ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಹಳೇಕೋಟೆ ಗ್ರಾಮದಲ್ಲಿ ನಡೆದಿದೆ.
ಆಟೋ ಮತ್ತು ಬೈಕ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಪ್ರವೀಣ್ (28)ಸ್ಥಳದಲ್ಲೆ ಸಾವನ್ನಪ್ಪಿದ್ದು, ಡಿಕ್ಕಿಯ ರಭಸಕ್ಕೆ ಆಟೋ ಇನ್ನೊಂದು ಬದಿ ಪಲ್ಟಿ ಹೊಡೆದಿದೆ.
ಘಟನೆ ಸಂಬಂಧ ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
