ಮೂಡಿಗೆರೆ: ಬ್ರಹ್ಮಶ್ರೀ ನಾರಾಯಣ ಗುರು ಮಲಯಾಳಂ ಸೇವಾ ಸಮಾಜದ ವತಿಯಿಂದ ಐದನೇ ವರ್ಷದ ವಾರ್ಷಿಕೋತ್ಸವ, ಓಣಂ ಹಬ್ಬ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆಯನ್ನು ಮೂಡಿಗೆರೆ ತಾಲ್ಲೂಕು ಪಂಚಾಯಿತಿ ದೀನ್ ದಯಾಳ್ ಸಭಾಂಗಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮವನ್ನು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಂಪ್ರದಾಯಬದ್ಧ ಆಚರಣೆಗಳೊಂದಿಗೆ ನಡೆಸಲಾಯಿತು. ಸಮಾಜದ ಸದಸ್ಯರು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಜಗನ್ಮೋಹನ್ ಅವರು ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜದಲ್ಲಿ ಸಮಾನತೆ, ಸಹೋದರತೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಲು ಶ್ರಮಿಸಿದ ಮಹಾನ್ ಸಮಾಜ ಸುಧಾರಕರಾಗಿದ್ದಾರೆ. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು, ಸಮಾಜದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಹೇಳಿದರು.
ಓಣಂ ಹಬ್ಬವು ಎಲ್ಲರನ್ನೂ ಒಗ್ಗೂಡಿಸುವ ಹಬ್ಬವಾಗಿದ್ದು, ಪರಸ್ಪರ ಪ್ರೀತಿ, ಸೌಹಾರ್ದತೆ ಮತ್ತು ಸಹಬಾಳ್ವೆಯ ಸಂದೇಶವನ್ನು ಸಾರುತ್ತದೆ. ಸಮಾಜದ ವತಿಯಿಂದ ಮುಂದಿನ ದಿನಗಳಲ್ಲಿಯೂ ವಿವಿಧ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮಾಜಮುಖಿ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಸಂಘದ ಅಧ್ಯಕ್ಷೆ ಸುಮಿತ್ರಾ ವೇಲಾಯಿದನ್. ತಾಲೂಕು ಅಧ್ಯಕ್ಷ .ಸುಧಾಕರ್. ಕಾರ್ಯದರ್ಶಿಯಾದ ಆರ್ ಕೃಷ್ಣ. ಸಹಕಾರಿದರ್ಶಿ ಎಂ ಮೋಹನ್. ಕೆಲ್ಲೂರು ಘಟಕದ ಅಧ್ಯಕ್ಷರಾದ ಅನಿಶ್. ಕುನ್ನಳ್ಳಿ ಘಟಕದ ಅಧ್ಯಕ್ಷರಾದ ಎಂಸಿ ರಾಜು. ಪದಾಧಿಕಾರಿಗಳು, ಮಹಿಳಾ ಸಂಘದ ಸದಸ್ಯರು, ಯುವಕರು, ಹಿರಿಯರು ಹಾಗೂ ಸಮಾಜದ ಬಂಧುಗಳು ಉಪಸ್ಥಿತರಿದ್ದರು
