ಚಿಕ್ಕಮಗಳೂರು: ಮೂಡಿಗೆರೆ ಹಾಗೂ ಚಿಕ್ಕಮಗಳೂರು ತಾಲೂಕಿನ ಹತ್ತಾರು ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಯಾಗುತ್ತಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಚಿಕ್ಕಮಗಳೂರು ಹಾಗೂ ಮೂಡಿಗೆರೆ ತಾಲೂಕಿನರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.
2023ರ ವಿಧಾನಸಭಾ ಚುನಾವಣೆಯ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿಯ ಪ್ರಮುಖ ಮುಖಂಡ ವಿಜಯ್ ಕುಮಾರ್ ಅವರ ನೇತೃತ್ವದಲ್ಲಿ ಈ ಪಕ್ಷಾಂತರ ಪ್ರಕ್ರಿಯೆ ನಡೆದಿದೆ. ಇವರ ಜೊತೆ ಹಿಂದುತ್ವವಾದಿ ಹಾಗೂ ಭಜರಂಗದಳದ ಮಾಜಿ ಜಿಲ್ಲಾ ಸಂಚಾಲಕರಾದ ತುಡುಕೂರು ಮಂಜು, ಯೂತ್ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಮಂಜು ಸೇರಿದಂತೆ ಬಿಜೆಪಿ ಯುವ ಮೋರ್ಚಾ ಮಂಡಲದ ಪ್ರಮುಖ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್-ಬಿಜೆಪಿಯ 200ಕ್ಕೂ ಹೆಚ್ಚು ಸಕ್ರಿಯ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ.
