Monday, February 9, 2026
Homeಜಿಲ್ಲಾಸುದ್ದಿಮೂಡಿಗೆರೆ: ಜಿ. ಹೊಸಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಮೂಡಿಗೆರೆ: ಜಿ. ಹೊಸಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಮೂಡಿಗೆರೆ: G ಹೊಸಹಳ್ಳಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಪೋಷಕರ ಸಭೆಯನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ SDMC ಅಧ್ಯಕ್ಷ ರವಿ ಮಾತನಾಡಿ, ನೆಹರು ಅವರ ಜನ್ಮ ದಿನದ ಅಂಗವಾಗಿ ಈ ದಿನವನ್ನು ಮಕ್ಕಳ ದಿನಾಚರಣೆಯಾಗಿ ಆಚರಿಸುತ್ತೇವೆ, ಮಕ್ಕಳು ದೇಶದ ಆಸ್ತಿ ಉತ್ತಮ ಶಿಕ್ಷಣ ಪಡೆದು ಗೌರವಾನ್ವಿತ ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದರು

ಮಕ್ಕಳ ದಿನಾಚರಣೆ ಪ್ರಯುಕ್ತ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ಮಕ್ಕಳು ತಮ್ಮ ಪ್ರತಿಭೆ ಪ್ರದರ್ಶಿಸಿದರು. ಇದೆ ಸಂದರ್ಭದಲ್ಲಿ ಸುಮಾರು 60 ರಿಂದ 70 ಸಾವಿರ ವೆಚ್ಚದಲ್ಲಿ ಶಾಲೆಯ ಮಕ್ಕಳಿಗೆ ಸಮವಸ್ತ್ರ ನೀಡಿದ ಜಿ ಹೊಸಹಳ್ಳಿಯ ಹಿರಿಯ ಕಾಫಿ ಬೆಳೆಗಾರರದ H S ರಾಜೇಗೌಡರನ್ನು ಶಾಲಾ ಆಡಳಿತ ಮಂಡಳಿ ಹಾಗೂ ಪೋಷಕರು ಸನ್ಮಾನಿಸಿದರು.ಇದೇ ವೇಳೆ ನವ ಚೇತನ ಗೆಳೆಯರ ಬಳಗದ ವತಿಯಿಂದ ಮಕ್ಕಳಿಗೆ ಟೈ, ಐಡಿ ಕಾರ್ಡ್ ಹಾಗೂ ಬೆಲ್ಟ್ ವಿತರಿಸಿದರು

ಈ ಸಂದರ್ಭದಲ್ಲಿ , ಯೋಗೇಶ್ ಕುಮಾರ್, ಜೆಸಿಐ ಗೋಣಿಬೀಡು ಹೊಯ್ಸಳ ಸಂಸ್ಥೆಯ ಅಧ್ಯಕ್ಷರು ಜಗತ್‌ ಗೌಡ, ಶಾಲಾ ಹಳೆ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ರಂಜಿತ್, ಗ್ರಾಮ ಪಂಚಾಯತ್ ಸದಸ್ಯರಾದ ರಘು, ಹಳೆ ವಿದ್ಯಾರ್ಥಿ ಸಂಘ ದ ಕಾರ್ಯದರ್ಶಿ ವಿಠಲ್, ಶಾಲಾ ಮುಖ್ಯೋಪಾಧ್ಯಾಯರಾದ ರಂಗಸ್ವಾಮಿ, ಪೋಷಕರಾದ ಪ್ರಕಾಶ್, ಉಮೇಶ್, ಮಹೇಶ್, ಪ್ರವೀಣ್,ಶಾಲಾ ಶಿಕ್ಷಕರು, ಪೋಷಕರು, ಶಾಲಾ ಮಕ್ಕಳು, ಗ್ರಾಮಸ್ಥರು, ಮತ್ತಿತರರು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!