ಮೂಡಿಗೆರೆ: ಸಾರಿಗೆ ಬಸ್ ಮತ್ತು ದ್ವಿ ಚಕ್ರ ವಾಹನ ನಡುವೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಬೀಡು ಸಮೀಪದ ಕಸ್ಕೇಬೈಲು ಬಳಿ ನಡೆದಿದೆ.
ಹೌದು .. ಮೂಡಿಗೆರೆ ಕಡೆಗೆ ತೆರಳುತ್ತಿದ್ದ KSRTC ಬಸ್ʼಗೆ ಎದುರಿನಿಂದ ಬಂದ ಸ್ಕೂಟಿಯೊಂದು ಡಿಕ್ಕಿಯಾಗಿದೆ.ಡಿಕ್ಕಿಯ ತೀವ್ರತೇಯ ರಭಸಕ್ಕೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಗೋಣಿಬೀಡು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
