Tuesday, February 10, 2026
Homeಕ್ರೈಮ್ಮೂಡಿಗೆರೆ : ಖದೀಮರ ಕೈಚಳಕ: 2 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕದ್ದು ಪರಾರಿ!

ಮೂಡಿಗೆರೆ : ಖದೀಮರ ಕೈಚಳಕ: 2 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕದ್ದು ಪರಾರಿ!

ಮೂಡಿಗೆರೆ : ತಾಲೂಕಿನ ಬಕ್ಕಿ ಗ್ರಾಮದಲ್ಲಿ ಮಂಗಳವಾರ ಹಾಡುಹಗಲೇ ಕಳ್ಳರ ಕೈಚಳಕ ನಡೆದಿದ್ದು, ಕುಮಾರ್ ಎಂಬುವರ ಮನೆಯಿಂದ ಸುಮಾರು 2 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿರುವ ಘಟನೆ ಬೆಳಕಿಗೆ ಬಂದಿದೆ.

ಬಕ್ಕಿ ಗ್ರಾಮದ ನಿವಾಸಿ ಕುಮಾರ್ ಅವರು ಬೆಳಗ್ಗೆ ತಮ್ಮ ಕೆಲಸಕ್ಕೆ ತೆರಳಿದ್ದು, ಮಧ್ಯಾಹ್ನದ ಊಟಕ್ಕೆ ಮನೆಗೆ ಹಿಂದಿರುಗಿದಾಗ ಕಳ್ಳತನದ ಪ್ರಕರಣ ಬಯಲಾಗಿದೆ.

ಕಳ್ಳರು ಮನೆಯ ಮುಖ್ಯ ಬಾಗಿಲಿನ ಬೀಗವನ್ನು ಮುರಿದು ಒಳ ನುಗ್ಗಿದ್ದಾರೆ. ಬಳಿಕ ಮನೆಯೊಳಗಿದ್ದ ಬೀರುವಿನ ಬೀಗವನ್ನು ಒಡೆದು ಅದರಲ್ಲಿದ್ದ ಆಭರಣಗಳನ್ನು ದೋಚಿದ್ದಾರೆ.

ಕಳ್ಳರು ಕಿವಿಯ ಓಲೆ, ಕಾಲು ಚೈನ್, ಮೂಗಿನ ಬೊಟ್ಟು ಸೇರಿದಂತೆ ಇತರೆ ಚಿನ್ನಾಭರಣಗಳು ಹಾಗೂ ನಗದನ್ನು ಕಳವು ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ಬಣಕಲ್ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕಳ್ಳರನ್ನು ಶೀಘ್ರವಾಗಿ ಪತ್ತೆಹಚ್ಚಲು ಮತ್ತು ದೋಚಿರುವ ವಸ್ತುಗಳನ್ನು ವಶಪಡಿಸಿಕೊಳ್ಳಲು ಪೊಲೀಸರು ಬಲೆ ಬೀಸಿದ್ದಾರೆ. ‌

ಘಟನೆ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!