ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಜನ್ನಾಪುರ ಗ್ರಾಮದಲ್ಲಿ ಟ್ರಾನ್ಸ್ ಫಾರ್ಮರ್ ದುರಸ್ಥಿ ವೇಳೆ ಕರೆಂಟ್ ಶಾಕ್ ತಗುಲಿ 20 ಅಡಿ ಎತ್ತರದ ಕಂಬದಿಂದ ಲೈನ್ ಮ್ಯಾನ್ ಬಿದ್ದು ಗಾಯಗೊಂಡ ಘಟನೆ ನಡೆದಿದೆ.
ಗಾಯಗೊಂಡ ಲೈನ್ ಮ್ಯಾನ್ ಬಳ್ಳಾರಿ ಮೂಲದ ಪ್ರಕಾಶ್ ಎಂದು ಗುರುತಿಸಲಾಗಿದೆ. ಪ್ರಕಾಶ್ ಕಂಬದಿಂದ ಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಪ್ರಕರಣ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕಾಶ್ ಕಂಬ ಹತ್ತಿ ಲೈನ್ ಸರಿ ಮಾಡುವಾಗ ಈ ದುಂತರ ಸಂಭವಿಸಿದೆ.
ಇನ್ನೂ ಗಾಯಾಳುವನ್ನು ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತದೆ.
