ಮೂಡಿಗೆರೆ : ದತ್ತ ಜಯಂತಿ ಆಚರಣೆ ಗಮನದಲ್ಲಿಟ್ಟುಕೊಂಡು ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡವನ್ನು ಸಂಪರ್ಕಿಸುವ ಗಡಿ ಪ್ರದೇಶ ಕೊಟ್ಟಿಗೆಹಾರದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ನಡೆಸಲಾಯಿತು
ಮಂಗಳೂರು ಧರ್ಮಸ್ಥಳ ಭಾಗಗಳಿಂದ ಮೂಡಿಗೆರೆ -ಚಿಕ್ಕಮಗಳೂರು ಬರುತ್ತಿರುವ ಪ್ರತಿಯೊಂದು ವಾಹನದ ತಪಾಸಣೆ ಕಡ್ಡಾಯಗೊಳಿಸಿದ್ದು, ಕೊಟ್ಟಿಗೆಹಾರ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನೂ ಹೆಚ್ಚುವರಿಯಾಗಿ ನಿಯೋಜಿಸಲಾಗಿದೆ.
ಭದ್ರತೆಗಾಗಿ ದಾವಣಗೆರೆ, ಮೈಸೂರು, ಕಲಬುರಗಿ ಸೇರಿದಂತೆ ವಿವಿಧ ಹೊರ ಜಿಲ್ಲೆಗಳಿಂದಲೂ ಪೊಲೀಸರು ಬಂದಿದ್ದು, ಬಣಕಲ್ ಪೊಲೀಸ್ ಠಾಣೆಯ ಪಿ.ಎಸ್.ಐ ರೇಣುಕಾ ಅವರ ನೇತೃತ್ವದಲ್ಲಿ ವಾಹನ ತಪಾಸಣೆ ಕಾರ್ಯ ನಡೆಯುತ್ತಿದೆ.
ಇದೆ ಮಾರ್ಗದಲ್ಲಿ ಸಾಗಿ ಬರುತ್ತಿದ್ದ ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಕಾರು ಕೂಡ ತಪಾಸಣೆ ನಡೆಸಲಾಯಿತು. ಈ ಕುರಿತು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ
ದತ್ತ ಜಯಂತಿ ಹಿನ್ನೆಲೆ ಅಂಗಡಿ–ಮುಂಗಟ್ಟು ಮುಚ್ಚುವಂತೆ ಸೂಚಿಸಿದ್ದು ಬುಧವಾರ ರಾತ್ರಿ 10 ಗಂಟೆಯಿಂದ ಶುಕ್ರವಾರ ಬೆಳಿಗ್ಗೆ 6 ಗಂಟೆಯವರೆಗೆ ಕೊಟ್ಟಿಗೆಹಾರ, ಬಣಕಲ್, ಮೂಡಿಗೆರೆ ಹಾಂದಿ, ಆಲ್ದೂರು ಸೇರಿದಂತೆ ಹೆದ್ದಾರಿಯಲ್ಲಿರುವ ಎಲ್ಲಾ ಅಂಗಡಿ–ಮುಂಗಟ್ಟುಗಳು ಹಾಗೂ ಬಾರ್ ಮುಚ್ಚುವಂತೆ ಸೂಚನೆ ನೀಡಲಾಗಿದೆ.
ದತ್ತ ಜಯಂತಿ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕೊಟ್ಟಿಗೆಹಾರ ಚೆಕ್‌ಪೋಸ್ಟ್ ಪ್ರದೇಶದಲ್ಲಿ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಮಾಡಿದೆ.
