Friday, February 13, 2026
Homeಜಿಲ್ಲಾಸುದ್ದಿಮೂಡಿಗೆರೆ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: AITUC & ಅಂಗನವಾಡಿ ಕಾರ್ಯಕರ್ತೆಯರಿಂದ ಸರ್ಕಾರಕ್ಕೆ ಮನವಿ

ಮೂಡಿಗೆರೆ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: AITUC & ಅಂಗನವಾಡಿ ಕಾರ್ಯಕರ್ತೆಯರಿಂದ ಸರ್ಕಾರಕ್ಕೆ ಮನವಿ

ಮೂಡಿಗೆರೆ : ತಾಲೂಕಿನ AITUC ಹಾಗೂ ಅಂಗನವಾಡಿ ಕಾರ್ಯಕರ್ತೆಯರು ತಾವು ಅನುಭವಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಇಂದು ತಹಶೀಲ್ದಾರ್ ಮುಖೇನ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು

ಈ ಸಂದರ್ಭದಲ್ಲಿ ಮಾತನಾಡಿದ ಮೂಡಿಗೆರೆ ಅಂಗನವಾಡಿ ಒಕ್ಕೂಟದ ಅಧ್ಯಕ್ಷೆ ಕೆ.ಆರ್. ಶೈಲಾ ನಾರಾಯಣ್ಗೌಡ ದೇಶದ 10 ಕೇಂದ್ರ ಕಾರ್ಮಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಲ್ಲಿ ದುಡಿಯುವ ವರ್ಗ ಎದುರಿಸುತ್ತಿರುವರುವ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗು ಸಹಾಯಕಿಯರ ಸಂಘಟನೆಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ದೇಶವ್ಯಾಪ್ತಿ ಮುಷ್ಕರವನ್ನು ಹಮ್ಮಿಕೊಳ್ಳಲಾಗಿದ್ದು. 2026 ರ ಕೇಂದ್ರ ಬಜೆಟ್ ನಲ್ಲಿ ಅಂಗನವಾಡಿಯವರಿಗೆ ಗೌರವದನ ಹೆಚ್ಚಿಸಿರುವುದಿಲ್ಲ ಹಾಗು ಹಲವು ವರ್ಷಗಳಿಂದ ಕೇಂದ್ರ ಸರ್ಕಾರ ಗೌರವಧನ ಹೆಚ್ಚಿಸಿಲ್ಲ ಇದಕ್ಕಾಗಿ ಮುಷ್ಕರ ಮಾಡಿ ಮಾನ್ಯ ತಹಸೀಲ್ದಾರ್ ಅವರಿಗೆ ಮನವಿ ನೀಡಿ ಅದನ್ನು ಪ್ರದಾನ ಮಂತ್ರಿಗಳಾದ ನರೇಂದ್ರ ಮೋದಿ ಅವರಿಗೆ ತಲುಪಿಸುವಂತೆ ಹೇಳಲಾಯಿತು

ಅಲ್ಲದೆ ಅಂಗನವಾಡಿ ಕಾರ್ಯಕರ್ತೆಯರು ಅನುಭವಿಸುತ್ತಿರುವ ಹಲವಾರು ಸಮಸ್ಯೆಗಳನ್ನು ಬಗೆಹರಿಸಬೇಕು ಎಂದರು

ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಸಾಂಚಿತ, ಸತ್ಯ ರೇಣುಕಾ, ಶಿಲ್ಪಾ, ವೀಣಾ, ಸುಮತಿ, ಮಹಾಲಕ್ಷ್ಮಿ, ಸುಮಿತ್ರಾ, ರಂಜಿತಾ, ಸೌಮ್ಯ ಚೈತ್ರ, ಗೀತಾ ಸೇರಿ ಹಲವರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!