Wednesday, February 11, 2026
Homeಜಿಲ್ಲಾಸುದ್ದಿಮೂಡಿಗೆರೆ: ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿರುವ ಜ್ವರ ಆತಂಕ: ಒಂದೇ ಊರಿನ ಇಬ್ಬರು ಮಕ್ಕಳು ಸೇರಿದಂತೆ 8 ತಿಂಗಳ...

ಮೂಡಿಗೆರೆ: ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿರುವ ಜ್ವರ ಆತಂಕ: ಒಂದೇ ಊರಿನ ಇಬ್ಬರು ಮಕ್ಕಳು ಸೇರಿದಂತೆ 8 ತಿಂಗಳ ಶಿಶು ಜ್ವರಕ್ಕೆ ಬಲಿ

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನಲ್ಲಿ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿರುವ ಜ್ವರ ಆತಂಕ ಮೂಡಿಸಿದೆ. ಒಂದೇ ಊರಿನ ಇಬ್ಬರು ಮಕ್ಕಳು ಸೇರಿದಂತೆ 8 ತಿಂಗಳ ಶಿಶು ಜ್ವರಕ್ಕೆ ಬಲಿಯಾಗಿದೆ. 20 ಕ್ಕೂ ಅಧಿಕ ಮಕ್ಕಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಲೆನಾಡು ಭಾಗದಲ್ಲಿ ಮುಂಗಾರು ಮಳೆ ಧಾರಾಕಾರವಾಗಿಸುರಿಯುತ್ತಿದೆ. ವಾಡಿಕೆ ಪ್ರಮಾಣಕ್ಕಿಂತ ಶೇ 90ಕ್ಕಿಂತ ಹೆಚ್ಚು ಸುರಿದಿರುವ ಮಳೆ ಕೊಂಚ ಬಿಡುವು ನೀಡಿ ಸೂರ್ಯನ ದರ್ಶನ ಮಾಡಿಸಿ, ಮತ್ತೆ ಆರ್ಭಟಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗವಾದ ಮೂಡಿಗೆರೆಯಲ್ಲಿ ಮಳೆಗಾಲದಲ್ಲಿ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿರುವ ಜ್ವರ ಪೋಷಕರನ್ನ ಕಂಗಾಲು ಮಾಡಿದೆ.

ಮೂಡಿಗೆರೆ ತಾಲೂಕಿನಲ್ಲಿ ಮಕ್ಕಳಲ್ಲಿ ಹೆಚ್ಚಾಗಿ ಜ್ವರ ಕಾಣಿಸಿಕೊಳ್ಳುತ್ತಿದ್ದು. ಜ್ವರಕ್ಕೆ ಮೂವರು ಮಕ್ಕಳು ಮೃತಪ್ಪಟಿದ್ದಾರೆ. ಚಿಕ್ಕಮಗಳೂರು ಹಾಸನ , ಶಿವಮೊಗ್ಗ ಆಸ್ಪತ್ರೆಗಳ ಐಸಿಯುನಲ್ಲಿ 16ಕ್ಕೂ ಹೆಚ್ಚು ಮಕ್ಕಳು ದಾಖಲಾಗಿದ್ದರೇ, ಸಾವಿರಾರು ಮಕ್ಕಳಲ್ಲಿ ಜ್ವರದ ಲಕ್ಷಣ ಕಾಣಿಸುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!