Wednesday, November 4, 2026
Homeಜಿಲ್ಲಾಸುದ್ದಿಮೂಡಿಗೆರೆ: ಕಾಂಗ್ರೆಸ್‌ ಮುಖಂಡ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎಸ್. ಅನಂತ್ ನಿಧನ!

ಮೂಡಿಗೆರೆ: ಕಾಂಗ್ರೆಸ್‌ ಮುಖಂಡ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎಸ್. ಅನಂತ್ ನಿಧನ!

Telegram Group
Join Now

ಮೂಡಿಗೆರೆ: ಮೂಡಿಗೆರೆ ಎಚ್‌ಪಿ ಗ್ಯಾಸ್ ಸಂಸ್ಥೆಯೊಂದಿಗೆ ಗುರುತಿಸಿಕೊಂಡಿದ್ದ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು ಹಾಗೂ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿದ್ದ ಎಂ.ಎಸ್. ಅನಂತ್ ಅವರ ನಿಧನದಿಂದ ಮೂಡಿಗೆರೆ ತಾಲ್ಲೂಕಿನ ರಾಜಕೀಯ, ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.

ಕೆಪಿಸಿಸಿಯಲ್ಲಿ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಅವರು ರಾಜಕೀಯ ಕ್ಷೇತ್ರದಲ್ಲಿ ಮುತ್ಸದ್ದಿ ನಾಯಕನಾಗಿ ಗುರುತಿಸಿಕೊಂಡಿದ್ದರು. ಜಿಲ್ಲಾ ಬೌದ್ಧ ಮಹಾಸಭಾದ ಅಧ್ಯಕ್ಷರಾಗಿ, ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಸಂಸ್ಥೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಜಿಲ್ಲಾ ಪದವೀಧರ ಸಹಕಾರ ಸಂಘದ ನಿರ್ದೇಶಕರಾಗಿ ಹಾಗೂ ಮೂಡಿಗೆರೆ ಬಾಲಕರ ಪ್ರೌಢಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಜಿಲ್ಲಾ ಬುದ್ಧ ವಿಹಾರ ಹಾಗೂ ಮೂಡಿಗೆರೆ ಅಂಬೇಡ್ಕರ್ ಭವನ ನಿರ್ಮಾಣದ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರು, ಕಾಂಗ್ರೆಸ್ ಪಕ್ಷದ ಉತ್ತಮ ಬರಹಗಾರ, ಪ್ರಭಾವಿ ವಾಗ್ಮಿ ಹಾಗೂ ಸಂಘಟಕರಾಗಿದ್ದರು. ಸಮಾಜದ ಪ್ರಮುಖ ಕಾರ್ಯಗಳು ಮತ್ತು ಜನಪರ ಹೋರಾಟಗಳಲ್ಲಿ ಸದಾ ಮುಂಚೂಣಿಯಲ್ಲಿದ್ದು, ತಮ್ಮ ಸೇವೆ ಹಾಗೂ ಸಾಮಾಜಿಕ ಕಳಕಳಿಯಿಂದ ಜನರ ಗೌರವಕ್ಕೆ ಪಾತ್ರರಾಗಿದ್ದರು.
ಪತ್ನಿ ಹಾಗೂ ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗ, ಸ್ನೇಹಿತರು ಮತ್ತು ಒಡನಾಡಿಗಳನ್ನು ಅಗಲಿದ್ದಾರೆ.

ಮಾಜಿ ಸಚಿವರಾದ ಶ್ರೀಮತಿ ಮೋಟಮ್ಮ, ಮೂಡಿಗೆರೆ ಶಾಸಕಿ ಶ್ರೀಮತಿ ನಯನಾ ಮೋಟಮ್ಮ, ದಾರದಹಳ್ಳಿ ವಿಎಸ್‌ಎಸ್‌ಎನ್‌ನ ಮಾಜಿ ನಿರ್ದೇಶಕ ಎಂ.ಎಸ್. ಆನಂದ್ ಸೇರಿದಂತೆ ಕುಟುಂಬ ವರ್ಗದವರು, ಬಂಧುಗಳು, ರಾಜಕೀಯ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!