ಮೂಡಿಗೆರೆ: ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ 2 ತಿಂಗಳ ಮಗು ಸಾವನ್ನಪ್ಪಿರುವ ಆರೋಪ ಮೂಡಿಗೆರೆ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಕೇಳಿ ಬಂದಿದೆ.

ಹೌದು ..ಮೂಡಿಗೆರೆ ತಾಲೂಕಿನ ಸುಂಕಸಾಲೆ ಗ್ರಾಮದ ಶೇಖರ್ ದಂಪತಿಯ 2 ತಿಂಗಳ 10 ದಿನದ ಮಗು ತೀವ್ರ ಜ್ವರ, ಕಫದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ವೈದ್ಯರಿಲ್ಲದ ಕಾರಣ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವಂತೆ ತಿಳಿಸಿದ್ದಾರೆ.
ಆದರೆ ಸುಮಾರು ಅರ್ಧ ಗಂಟೆ ಕಾದರು ಕೂಡ ಆಂಬುಲೆನ್ಸ್ ಇಲ್ಲದೇ. ಜೊತೆಗೆ ಬೇರೆ ವೈದ್ಯರು ಚಿಕಿತ್ಸೆ ನೀಡಲಿಲ್ಲ. ಹೀಗಾಗಿ ಸೂಕ್ತ ಸಮಯಕ್ಕೆ ಆಂಬುಲೆನ್ಸ್ ಹಾಗೂ ಆಕ್ಸಿಜನ್ ಸಿಗದೆ ಮಗು ಸಾವನ್ನಪ್ಪಿದೆ
ಮಗು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷಕ್ಕೆ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.