ಮೂಡಿಗೆರೆ: ಕಾಫಿನಾಡಿನಲ್ಲಿ ದಿನದಿಂದ ದಿನಕ್ಕೆ ಕಾಡುಪ್ರಾಣಿಗಳ ಉಪಟಳ ಹೆಚ್ಚಾಗುತ್ತಿದ್ದು ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಗೌತಳ್ಳಿ ಗ್ರಾಮದಲ್ಲಿ ಕಂಡುಬಂದಿದೆ.
ಹೌದು .. ಇಂದು ಬೆಳಗ್ಗೆ ಸುಮಾರು 8:30ರ ವೇಳೆಗೆ ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಅಸಾಂ ಮೂಲದ ಮಹಿಳೆಯರಾದ ಸಬೀನ ಮತ್ತು ಸುಲ್ತಾನ ಎಂಬುವರ ಮೇಲೆ ಚಿರತೆ ದಾಳಿ ನಡೆಸಿದ್ದು ತಕ್ಷಣವೇ ಗಾಯಾಳುಗಳನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ʼ
ಘಟನಾ ಸ್ಥಳಕ್ಕೆ ಹಾಗೂ ಆಸ್ಪತ್ರೆಗೆ ಮೂಡಿಗೆರೆಯ ಅರಣ್ಯ ವಲಯಾಧಿಕಾರಿ (ರೇಂಜರ್) ಮಂಜುನಾಥ್
ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಗೊಳಿಸಿದೆ.
ಗೌತಳ್ಳಿ ಗ್ರಾಮ ಹಾಗೂ ಸುತ್ತಮುತ್ತಲ ಕಾಫಿತೋಟ ಪ್ರದೇಶದಲ್ಲಿ ಭೀತಿ ಉಂಟಾಗಿದ್ದು ಇಲ್ಲಿ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಓಡಾಡುವ ಸ್ಥಳವಾಗಿದ್ದು ಹಾಗಾಗಿ ಸ್ಥಳೀಯರಲ್ಲಿ ಇನ್ನು ಭಯದ ವಾತಾವರಣ ಹೆಚ್ಚಾಗಿದೆ. ಆದಷ್ಟೂ ಬೇಗ ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಚರಣೆ ಮುಂದುವರೆಸಿ ಚಿರತೆಯನ್ನು ಸೆರೆಹಿಡಿಯಬೇಕಾಗಿದೆ ಹಾಗೆ ಜನವಸತಿ ಪ್ರದೇಶ ಇರುವುದರಿಂದ ಸೂಕ್ತ ಕ್ರಮ ವಹಿಸಬೇಕೆಂದು ಸ್ಥಳೀಯರು, ಕಾಫಿ ತೋಟದ ಮಾಲೀಕರು ಆಗ್ರಹಿಸಿದ್ದಾರೆ.
