ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆಳಗೂರು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ 12 ಚಕ್ರದ ಲಾರಿಯೊಂದು ತಿರುವಿನಲ್ಲಿ ಪಲ್ಟಿಯಾಗಿ ಸುಮಾರು 50–60 ಅಡಿ ಪ್ರಪಾತಕ್ಕೆ ಉರುಳಿದ ಘಟನೆ ನಡೆದಿದೆ.
ದೊಡ್ಡಬಳ್ಳಾಪುರದಿಂದ ಹಿರೇಬೈಲು ಗ್ರಾಮಕ್ಕೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ಕೆಳಗೂರು ಟೀ ಎಸ್ಟೇಟ್ ಲೈನ್ ಸಮೀಪ ಪ್ರಪಾತಕ್ಕೆ ಉರುಳಿದೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಲಾರಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸಾಹಸಪಟ್ಟು ಲಾರಿಯೊಳಗೆ ಸಿಲುಕಿದ್ದ ಚಾಲಕನನ್ನು ಹೊರತೆಗೆದರು. ನಂತರ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ರವಾನಿಸಲಾಗಿದೆ
ಘಟನೆ ನಡೆದ ಸ್ಥಳದ ಸಮೀಪ ಟೀ ಎಸ್ಟೇಟ್ ಕಾರ್ಮಿಕರ ಲೈನ್ ಮನೆಗಳಿದ್ದು, ಅದೃಷ್ಟವಶಾತ್ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಈ ಘಟನೆ ಬಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

