ಮೂಡಿಗೆರೆ: ಪಟ್ಟಣದ ಎಂ. ಜಿ. ಎಂ ಆಸ್ಪತ್ರೆಗೆ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಅವರು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯ ಮೂಲಸೌಕರ್ಯ ಹಾಗೂ ಕುಂದು–ಕೊರತೆಗಳ ಬಗ್ಗೆ ಪರಿಶೀಲಿಸಿದರು.

ಸಿಬ್ಬಂದಿಯ ಹಾಜರಾತಿ ಪುಸ್ತಕ, ಆಡಳಿತದ ಖರ್ಚು ವೆಚ್ಚದ ಕಡತಗಳನ್ನು ಪರಿಶೀಲಿಸಿ, ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಿರಬೇಕು ಎಂದು ಸೂಚಿಸಿದರು.
ಔಷಧ ಉಗ್ರಾಣ ಪರಿಶೀಲಿಸಿ, ಔಷಧಗಳನ್ನು ರೋಗಿಗಳಿಗೆ ಸಮರ್ಪಕವಾಗಿ ವಿತರಣೆ ಮಾಡುವಂತೆ ಸೂಚಿಸಿದರು. ಯಾವುದೇ ಕಾರಣಕ್ಕೂ ಖಾಸಗಿ ಔಷಧ ಅಂಗಡಿಗಳಲ್ಲಿ ಖರೀದಿಸಲು ಚೀಟಿ ಬರೆದುಕೊಟ್ಟಿದ್ದು ಕಂಡು ಬಂದಲ್ಲಿ ಶಿಸ್ತುಕ್ರಮ ಕೈಗೊಳ್ಳುವುದಾಗಿ ವೈದ್ಯರಿಗೆ ಎಚ್ಚರಿಕೆ ನೀಡಿದರು.
ಆಸ್ಪತ್ರೆ ಆವರಣದಲ್ಲಿ ಜನದಟ್ಟಣೆ ಗಮನಿಸಿದ ಶಾಸಕರು ಕೆಲವು ಕೊಠಡಿಗಳನ್ನು ರೋಗಿಗಳ ತಪಾಸಣೆಗೆ ಬಳಸಿಕೊಳ್ಳುವಂತೆ ಸೂಚನೆ ನೀಡಿದರು. ನಂತರ ರೋಗಿಗಳ ವಾರ್ಡ್ ಹೆರಿಗೆ ವಿಭಾಗ ಶಸ್ತ್ರಚಿಕಿತ್ಸಾ ವಿಭಾಗಕ್ಕೆ ತೆರಳಿ ರೋಗಿಗಳ ಆರೋಗ್ಯ ವಿಚಾರಿಸಿದರು.
ಆಸ್ಪತ್ರೆಯ ಸ್ವಚ್ಛತೆಗೆ ಹೆಚ್ಚು ಒತ್ತು ನೀಡಬೇಕು, ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದರ ಜೊತೆಗೆ ಸೌಜನ್ಯವಾಗಿ ವರ್ತಿಸಬೇಕು ಎಂದು ತಿಳಿಸಿದರು.
ಅಡುಗೆ ಹಾಗೂ ಊಟದ ಕೊಠಡಿಗಳನ್ನು ಪರಿಶೀಲಿಸಿ, ಸ್ವತಃ ಆಹಾರ ಪರಿಶೀಲಿಸಿ ರೋಗಿಗಳಿಗೆ ಗುಣಮಟ್ಟದ ಆಹಾರ ಒದಗಿಸಲು ಸೂಚಿಸಿದರು.
ಈ ಸಂದರ್ಭದಲ್ಲಿ ಆರೋಗ್ಯಧಿಕಾರಿ ದಂತ ವೈದ್ಯೆ ಪ್ರಿಯಾಂಕ ಪ್ರಭಾಕರ್ ಆರೋಗ್ಯ ರಕ್ಷಣಾ ಸಮಿತಿ ಸದಸ್ಯರಾದ ಚಂದ್ರು ಒಡೆಯರ್, ಮಹೇಶ್ ಬಾಳೂರು, ಕೋಮಲ, ಅನಂತ ಪದ್ಮನಾಬ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ವರದಿ :ಪುನೀತ್ ಕಡಿದಾಳು
9483811948
