Monday, July 13, 2026
Homeಕ್ರೈಮ್ಮೂಡಿಗೆರೆ: ಹೋಂ ಸ್ಟೇ ಬಾತ್‌ ರೂಮ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವಿಗೆ ಹೊಸ ಟ್ವಿಸ್ಟ್!

ಮೂಡಿಗೆರೆ: ಹೋಂ ಸ್ಟೇ ಬಾತ್‌ ರೂಮ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವಿಗೆ ಹೊಸ ಟ್ವಿಸ್ಟ್!

Telegram Group
Join Now

ಮೂಡಿಗೆರೆ: ಹೋಂ ಸ್ಟೇ ಬಾತ್ ರೂಂನಲ್ಲಿ ಸ್ನಾನಕ್ಕೆಂದು ತೆರಳಿದ್ದ ಯುವತಿ ಕುಸಿದು ಬಿದ್ದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಹಾಂದಿ ಗ್ರಾಮದಲ್ಲಿ ನಡೆದಿದೆ. ಈಗ ಈ ಕೇಸ್​ಗೆ ಹೊಸ ಟ್ವಿಸ್ಟ್​ ಸಿಕ್ಕಿದೆ.

ಹೌದು .. ಸ್ನೇಹಿತೆ ಎಂಗೇಜ್​ಮೆಂಟ್​ಗಾಗಿ ಬೆಂಗಳೂರಿನಿಂದ ಬಂದಿದ್ದ ರಂಜಿತಾ ಮತ್ತು ರೇಖಾ ಹಿಪ್ಲ ಹೋಂ ಸ್ಟೇನಲ್ಲಿ ರೂಂ ಪಡೆದಿದ್ದರು. ಆ ಬಳಿಕ ಸ್ನಾನದ ‌ಗೃಹದಲ್ಲಿ ರಂಜಿತಾ (27) ಅನುಮಾನಸ್ಪದ ಸಾವನ್ನಪ್ಪಿದ್ದರು. ಆದರೆ ಈ = ಹೋಂ ಸ್ಟೇಗೆ ಲೈಸೆನ್ಸ್​ ಇಲ್ಲ ಎಂಬುದು ಒಂದೆಡೆಯಾದರೆ, ಇಲ್ಲಿ ವಾಸ್ತವ್ಯ ಮಾಡಿದವರ ಮಾಹಿತಿ ಕೂಡ ನಿಗೂಢವಾಗಿರುವುದು ಪೊಲೀಸ್​ ತನಿಖೆ ವೇಳೆ ಬೆಳಕಿಗೆ ಬಂದಿದೆ.

ಇನ್ನು ಹೋಂ ಸ್ಟೇಗೆ ಪ್ರವಾಸೋದ್ಯಮ ಇಲಾಖೆ ಮತ್ತು ಜಿಲ್ಲಾಡಳಿತದಿಂದ ಲೈಸೆನ್ಸ್ ಇರಲಿಲ್ಲ. ಹೀಗಿದ್ದರೂ ಎಲ್ಲ ನಿಯಮಗಳನ್ನ ಗಾಳಿಗೆ ತೂರಿ ಕಳೆದ ಎರಡು ವರ್ಷಗಳಿಂದ ಮಾಲೀಕ ಇದನ್ನು ನಡೆಸಿಕೊಂಡು‌ ಬಂದಿದ್ದ. ಹೀಗಿದ್ದರೂ ಹೋಂ ಸ್ಟೇ ವಿರುದ್ಧ ಇಲ್ಲಿಯವರೆಗೆ ಯಾಕೆ ಕ್ರಮ ಆಗಿಲ್ಲ ಎಂಬ ಪ್ರಶ್ನೆಯೂ ಉದ್ಭವಿಸಿದೆ.

ಮೃತಳನ್ನ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ದೇವಾಲಾಪುರ ಗ್ರಾಮದ ರಂಜಿತಾ (27) ಎಂದು ಗುರುತಿಸಲಾಗಿದೆ. ಮೃತ ರಂಜಿತಾ ದಾವಣಗೆರೆ ಮೂಲದ ಗೆಳತಿ ರೇಖಾ ಅವರೊಂದಿಗೆ ಶುಕ್ರವಾರ ಸಂಜೆ ಹೋಂ ಸ್ಟೇನಲ್ಲಿ ತಂಗಿದ್ದರು. ಸ್ನೇಹಿತೆಯೊಬ್ಬಳ ನಿಶ್ಚಿತಾರ್ಥಕ್ಕಾಗಿ ರಂಜಿತಾ ಮತ್ತು ರೇಖಾ ಬೆಂಗಳೂರಿನಿಂದ ಬಂದಿದ್ದರು. 

ಶನಿವಾರ (ಅ.25) ಬೆಳಗ್ಗೆ ರೇಖಾ ಸ್ನಾನ ಮಾಡಿ ಬಂದ ನಂತರ ರಂಜಿತಾ ಸ್ನಾನಕ್ಕೆ ತೆರಳಿದ್ದರು. ತುಂಬಾ ಹೊತ್ತಾದರೂ ಅವರು ಹೊರ ಬಾರದಿದ್ದಾಗ ಮತ್ತು ನಲ್ಲಿಯ ನೀರು ಹರಿಯುವ ಶಬ್ದ ನಿರಂತರವಾಗಿ ಕೇಳುತ್ತಿದ್ದಾಗ ರೇಖಾ ಅವರು ಬಾಗಿಲು ಬಡಿದಿದ್ದಾರೆ. ಆದರೆ, ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ ಕಿಟಕಿಯಿಂದ ನೋಡಿದಾಗ ರಂಜಿತಾ ಸ್ನಾನಗೃಹದಲ್ಲಿ ಕುಸಿದು ಬಿದ್ದಿರುವುದು ಕಂಡುಬಂದಿದೆ. ತಕ್ಷಣ ಹೋಂ ಸ್ಟೇ ಸಿಬ್ಬಂದಿಗೆ ಮಾಹಿತಿ ನೀಡಿ ಬಾಗಿಲು ಒಡೆದು ನೋಡಿದಾಗ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರಂಜಿತಾರನ್ನು ಮೂಡಿಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ವೈದ್ಯರು ಯುವತಿ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments