Saturday, August 15, 2026
Homeಜಿಲ್ಲಾಸುದ್ದಿಮೂಡಿಗೆರೆ: ಟೈಲರ್ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ

ಮೂಡಿಗೆರೆ: ಟೈಲರ್ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ

Telegram Group
Join Now

ಮೂಡಿಗೆರೆ: ಸ್ವಾತಂತ್ರ್ಯೋತ್ಸವದ ನೆನಪಿಗಾಗಿ ಮೂಡಿಗೆರೆ ಟೈಲರ್ ಸಂಘದ ವತಿಯಿಂದ ಕಸಬಾ ಹೋಬಳಿ ದುಂಡುಗ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರಗಳನ್ನು ವಿತರಿಸುವ ಮೂಲಕ ಮಕ್ಕಳಿಗೆ ಪ್ರೋತ್ಸಾಹ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಸದಸ್ಯರು ಮಕ್ಕಳೊಂದಿಗೆ ಸಂವಾದ ನಡೆಸಿ ಅವರ ವಿದ್ಯಾಭ್ಯಾಸದ ಪ್ರಗತಿಯನ್ನು ಮೆಚ್ಚಿಕೊಂಡರು. ವಿದ್ಯಾರ್ಥಿಗಳ ಉತ್ಸಾಹಭರಿತ ಪಾಲ್ಗೊಳ್ಳುವಿಕೆಯಿಂದ ಕಾರ್ಯಕ್ರಮಕ್ಕೆ ಇನ್ನಷ್ಟು ಸೊಬಗು ಹೆಚ್ಚಿತು.

ಈ ಸೇವಾ ಚಟುವಟಿಕೆಯನ್ನು ಸ್ಥಳೀಯರು ಶ್ಲಾಘಿಸಿ, ಮುಂದಿನ ದಿನಗಳಲ್ಲಿಯೂ ಇಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಆಶಿಸಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರಾಧ್ಯಕ್ಷರಾದ ಹೆಚ್.ಎಂ. ಶಿವೆಗೌಡ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಜೊತೆಗೆ ಉಮಾ ಶಂಕರ್, ಷಣ್ಮುಖಾನಂದ, ಗಿರೀಶ್, ಸತೀಶ್, ಮಂಜುಳಾ, ಮೋಹನ್, ಮಂಜು ವಾಸು, ಸುರೇಶ್, ಶೃತಿ, ನರಸಿಂಹ ಟೈಲರ್ ಸೇರಿದಂತೆ ಸಂಘದ ಅನೇಕ ಸದಸ್ಯರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments