Monday, July 13, 2026
Homeಜಿಲ್ಲಾಸುದ್ದಿಮೂಡಿಗೆರೆ: ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆಯಲ್ಲಿ ಪ್ರಥಮ

ಮೂಡಿಗೆರೆ: ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆಯಲ್ಲಿ ಪ್ರಥಮ

Telegram Group
Join Now

ಮೂಡಿಗೆರೆ: ಲೋಕುವಳ್ಳಿ GHPS ಶಾಲೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯಿತು.

G ಹೊಸಹಳ್ಳಿ ಗ್ರಾಮದ GHPS ಶಾಲೆಯ ನಿಶಾ ಕಿರಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಶಾಲೆಗೂ. ಗ್ರಾಮಕ್ಕೂ ಕೀರ್ತಿ ತಂದಿದ್ದಾರೆ ಇವರು ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ನವರ ವೇಷ ಧರಿಸಿ ತೀರ್ಪುಗಾರರ ಹಾಗೂ ಜನರ ಕಣ್ಮನ ಸೆಳೆದರೂ.

ಜಿಲ್ಲಾ ಆಡಳಿತ ಮತ್ತು ತಾಲೂಕು ಆಡಳಿತ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮೂಡಿಗೆರೆ ವತಿಯಿಂದ ನಡೆದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಯಲ್ಲಿ ಈ ಸಾಧನೆಗೈದಿದ್ದಾರೆ.

ಶಾಲಾ ಶಿಕ್ಷಕರ ಮಾರ್ಗದರ್ಶನದಲ್ಲಿ ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿರುವ ವಿದ್ಯಾರ್ಥಿನಿ ನಿಶಾ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಈ ಕುರಿತು ಶಿಕ್ಷಕ ರಂಗಸ್ವಾಮಿ ಮಾತನಾಡಿ ನಮ್ಮ ಶಾಲೆಯ ವಿದ್ಯಾರ್ಥಿಗಳು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸದಾ ಮುಂದಿದ್ದಾರೆ, ಪ್ರಮುಖವಾಗಿ , ಛದ್ಮವೇಷ, ನೃತ್ಯ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವುದು ಸಂತಸದ ವಿಚಾರ. ಎಲ್ಲಾ ಶಿಕ್ಷಕರ ಶ್ರಮದಿಂದ ನಮ್ಮ ವಿದ್ಯಾರ್ಥಿಗಳು ಈ ಸಾಧನಗೈದಿದ್ದಾರೆ ಎಂದು ತಿಳಿಸಿದರು.

ಈ ಸಾಧನೆಗೆ ಕಾರಣೀಭೂತರಾದ ಚಿತ್ರ ಕಲಾಕಾರ ದೇವರಮಕ್ಕಿ ಶಂಕರ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಮೀನಾಕ್ಷಿ ಸೇರಿದಂತೆ G. ಹೊಸಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರು ಪೋಷಕರು ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments