Wednesday, August 12, 2026
Homeಕ್ರೈಮ್ಮೂಡಿಗೆರೆ: ರಸ್ತೆ ಅಪಘಾತದಲ್ಲಿ ಮೂರು ವರ್ಷದ ಬಾಲಕ ಸಾವು!

ಮೂಡಿಗೆರೆ: ರಸ್ತೆ ಅಪಘಾತದಲ್ಲಿ ಮೂರು ವರ್ಷದ ಬಾಲಕ ಸಾವು!

Telegram Group
Join Now

ಮೂಡಿಗೆರೆ: ರಸ್ತೆ ಅಪಘಾತದಲ್ಲಿ ಮೂರು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿಯಲ್ಲಿ ನಡೆದಿದೆ.

ಬೀಟಿಗೆ ನಿವಾಸಿ ಸಿದ್ದಿಕ್ ಯು.ಪಿ ಅವರ ಪುತ್ರ ಮಹಮ್ಮದ್ ಹಝೀರಿನ್ (3) ರಸ್ತೆ ಅಪಘಾತದಲ್ಲಿ ಮೃತಪಟ್ಟ ಬಾಲಕ. ಘಟನೆಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 ಬಾಲಕನು ಮನೆಯ ಸಮೀಪದಲ್ಲಿರುವ ಅಂಗಡಿಗೆ ತಿಂಡಿ ತರಲು ಹೋಗಿ, ತಿಂಡಿ ತೆಗೆದುಕೊಂಡು ವಾಪಸ್ ಮನೆಗೆ ಬರುತ್ತಿದ್ದ ವೇಳೆ ರಸ್ತೆ ದಾಟುವಾಗ ಕಾರು ಡಿಕ್ಕಿ ಹೊಡೆದಿದೆ. ಹೊಡೆತದ ಪ್ರಮಾಣ ಜಾಸ್ತಿಯಾಗಿದ್ದರಿಂದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಕುಟುಂಬ ಹಾಗೂ ಸ್ಥಳೀಯರನ್ನ ದುಃಖದಲ್ಲಿ ಮುಳುಗಿಸಿದೆ.

ಘಟನೆ ಸಂಬಂಧ ಮೂಡಿಗೆರೆ ಪೊಲೀಸರು ಕಾರು ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments