Friday, May 15, 2026
Homeಕ್ರೈಮ್ಮೂಡಿಗೆರೆ: ಟಿಪ್ಪರ್ ಲಾರಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು!

ಮೂಡಿಗೆರೆ: ಟಿಪ್ಪರ್ ಲಾರಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು!

ಮೂಡಿಗೆರೆ: ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ  ಮೂಡಿಗೆರೆ ತಾಲೂಕಿನ ಗೋಣಿಬೀಡು ಚರ್ಚ್ ಸಮೀಪ ನಡೆದಿದೆ.

ಮೃತ ಯುವಕ ಆಂಧ್ರ ಪ್ರದೇಶ ಮೂಲದವನಾಗಿದ್ದು, ಬೈಕ್‌ನಲ್ಲಿ ಬೆಡ್‌ಶೀಟ್, ರಗ್ಗು, ಟವಲ್ ಸೇರಿದಂತೆ ವಿವಿಧ ಗೃಹೋಪಯೋಗಿ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ವೇಗವಾಗಿ ಬಂದ ಟಿಪ್ಪರ್ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಟಿಪ್ಪರ್‌ ಚಾಲಕನ ತನಿಖೆ ಮುಂದುವರಿದಿದೆ. 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!