Saturday, March 28, 2026
Homeಕ್ರೈಮ್ಮೂಡಿಗೆರೆ: ಪರವಾನಗಿ ಇಲ್ಲದೆ ಅಕ್ರಮವಾಗಿ ಬಂದೂಕು ಇಟ್ಟಿದ್ದ ಇಬ್ಬರು ಅರೆಸ್ಟ್!

ಮೂಡಿಗೆರೆ: ಪರವಾನಗಿ ಇಲ್ಲದೆ ಅಕ್ರಮವಾಗಿ ಬಂದೂಕು ಇಟ್ಟಿದ್ದ ಇಬ್ಬರು ಅರೆಸ್ಟ್!

ಮೂಡಿಗೆರೆ: ಅಕ್ರಮವಾಗಿ ಬಂದೂಕುಗಳನ್ನು ಹೊಂದಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ, ಅವರಿಂದ ಎರಡು ಎಸ್‌ಬಿಬಿಎಲ್ (SBBL) ಬಂದೂಕುಗಳನ್ನು ಗೋಣಿಬೀಡು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ಬೈರಾಪುರ ಗ್ರಾಮದಲ್ಲಿ ಖಚಿತ ಮಾಹಿತಿ ಮೇರೆಗೆ ಪೊಲೀಸರು ನಡೆಸಿದ ದಾಳಿಯ ವೇಳೆ ಈ ಪ್ರಕರಣ ಬೆಳಕಿಗೆ ಬಂದಿದೆ.

ದಾಳಿಯ ಸಂದರ್ಭದಲ್ಲಿ ಗ್ರಾಮದ ನಿವಾಸಿಗಳಾದ ಪ್ರಸನ್ನ ಬಿ.ಡಿ. ಮತ್ತು ಪ್ರಭಾಕರ ಬಿ.ಸಿ. ಎಂಬುವವರು ತಮ್ಮ ಮನೆಗಳಲ್ಲಿ ಯಾವುದೇ ಅಧಿಕೃತ ಪರವಾನಗಿ ಇಲ್ಲದೆ ಎಸ್‌ಬಿಬಿಎಲ್‌ (SBBL) ಬಂದೂಕುಗಳನ್ನು ಇಟ್ಟುಕೊಂಡಿರುವುದು ಪತ್ತೆಯಾಗಿದೆ.

ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು, ಅವರ ಬಳಿಯಿದ್ದ ಅಕ್ರಮ ಬಂದೂಕುಗಳನ್ನು ಜಪ್ತಿ ಮಾಡಿದರು.

ಗೋಣಿಬೀಡು ಪೊಲೀಸ್ ಠಾಣೆಯ ಪಿಎಸ್‌ಐ ಹರ್ಷವರ್ಧನ್ ಅವರ ನೇತೃತ್ವದಲ್ಲಿ ನಡೆದ ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಠಾಣೆಯ ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು.

ಬಂಧಿತ ಆರೋಪಿಗಳ ವಿರುದ್ಧ ಗೋಣಿಬೀಡು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಅಕ್ರಮ ಆಯುಧಗಳ ಮೂಲ ಮತ್ತು ಅವುಗಳ ಉದ್ದೇಶದ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!