Tuesday, February 10, 2026
Homeಜಿಲ್ಲಾಸುದ್ದಿಮೂಡಿಗೆರೆ: ಗೋಣಿಬೀಡು ಗ್ರಾ. ಪಂ. ನೂತನ ಅಧ್ಯಕ್ಷರಾಗಿ ವಿಜೇಂದ್ರ ಅವಿರೋಧ ಆಯ್ಕೆ

ಮೂಡಿಗೆರೆ: ಗೋಣಿಬೀಡು ಗ್ರಾ. ಪಂ. ನೂತನ ಅಧ್ಯಕ್ಷರಾಗಿ ವಿಜೇಂದ್ರ ಅವಿರೋಧ ಆಯ್ಕೆ

ಮೂಡಿಗೆರೆ :. ಗೋಣಿಬೀಡು ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷ ಆಯ್ಕೆ ಪ್ರಕ್ರಿಯೆ ಇಂದು ನಡೆಯಿತು. ದಿನೇಶ್ ಅವರ ರಾಜೀನಾಮೆಯಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಪಡಿಸಲಾಗಿತ್ತು.

ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 22 ಮಂದಿ ಸದಸ್ಯರ ಬಲ ಹೊಂದಿರುವ ಗ್ರಾಮ ಪಂಚಾಯಿತಿ, ಅಧ್ಯಕ್ಷ ಸ್ಥಾನ ಸಾಮಾನ್ಯ ಪುರುಷ ಮೀಸಲಾಗಿತ್ತು.

ಅಧ್ಯಕ್ಷ ಸ್ಥಾನಕ್ಕೆ ವಿಜೇಂದ್ರ ಅವರೊಬ್ಬರೆ ನಾಮಪತ್ರವನ್ನು ಸಲ್ಲಿಸಿದ್ದು, ಮತ್ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿ ಸುಮಾ ನೂತನ ಅಧ್ಯಕ್ಷರಾಗಿ ವಿಜೇಂದ್ರ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿ ಘೋಷಿಸಿದರು.

ವಿಜೇಂದ್ರ ಅವರು ಗೋಣಿಬೀಡು ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ಅವರ ಬೆಂಬಲಿಗರು ಸಿಹಿ ಹಂಚಿ ಸಂಭ್ರಮಿಸಿದರು.

ನಂತರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ವಿಜೇಂದ್ರ
ಅವರು ತನ್ನನು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲಾ ಸದಸ್ಯರಿಗೂ ಕೃತಜ್ಞತೆಯನ್ನು ಸಲ್ಲಿಸಿ ಮಾತನಾಡುತ್ತಾ, ನನ್ನ ಅಧಿಕಾರ ಅವಧಿಯಲ್ಲಿ ಎಲ್ಲಾ ಸದಸ್ಯರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಉತ್ತಮ ಆಡಳಿತ ನೀಡುವುದಾಗಿ ಹಾಗು ವಿಶೇಷವಾಗಿ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕವಾಗಿ ಶ್ರದ್ದೆಯಿಂದ ಕಾರ್ಯ ನಿರ್ವಹಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂ ಮಾಜಿ ಅಧ್ಯಕ್ಷೆ ರಾಧಾ ಮಿತ್ರೆಶ್ ದಿನೇಶ್.ಉಪಾಧ್ಯಕ್ಷೆ ಸುಜಾತ, ಸದಸ್ಯರಾದ ಪ್ರಹ್ಲಾಡ್. ಮಹೇಶ್ ಅಗ್ರಹಾರ. ದೀಪಕ್,ರಘು.ಸುಪ್ರಿತಾ ನಯನ.ಮಹೇಶ್ ಸೇರಿದಂತೆ ಮನು ಗೌಡ ಮರಬೈಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿಂಚನ ಗೌಡ ಹಾಗು ಸಿಬ್ಬಂದಿ ಉಪಸ್ಥಿತರಿದ್ದರು

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!