ಮೂಡಿಗೆರೆ : ಅಯೋಧ್ಯ ಬಲಿದಾನ್ ದಿವಸ್ ಪ್ರಯುಕ್ತ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ರಕ್ತದಾನ ಶಿಬಿರವನ್ನು ಪಟ್ಟಣದ ಅಡ್ಯಂತಾಯ ಸಭಾಂಗಣದಲ್ಲಿ ನಡೆಯಿತು.
ಅಯೋಧ್ಯ ಶ್ರೀರಾಮ ಮಂದಿರಕ್ಕಾಗಿ ಹುತಾತ್ಮರಾದ ಧರ್ಮ ಯೋಧರಿಗೆ ರಕ್ತದಾನದ ಮೂಲಕ ಬಜರಂಗದಳದ ಕಾರ್ಯಕರ್ತರು ಗೌರವ ಸಮರ್ಪಿಸಿದರು.
ಭಾರತ ಮಾತೆ ಭಾವಚಿತ್ರಕ್ಕೆ ಪುಷ್ಪರ್ಚನೆ ಸಲ್ಲಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವೈದ್ಯ ರಾಮ ಚರಣ್ ಅಡ್ಯಂತಾಯ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಬಜರಂಗದಳದ ಕಾರ್ಯಚಟುವಟಿಕೆಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.
ವಿಶ್ವ ಹಿಂದೂ ಪರಿಷದ್ ತಾಲೂಕು ಅಧ್ಯಕ್ಷ ಸುಧೆವ್ ಗುತ್ತಿ ಮಾತನಾಡಿ “ಅಯೋಧ್ಯೆ ಶ್ರೀರಾಮ ಮಂದಿರ ಇವತ್ತು ಅತ್ಯಂತ ಭವ್ಯವಾಗಿ ನಿರ್ಮಾಣಗೊಂಡಿರುವ ಕಾರಣ ಅವತ್ತು ನಮ್ಮ ಹಿಂದೂ ಸಮಾಜದ ತ್ಯಾಗ ಮತ್ತು ಬಲಿದಾನ. ರಾಮಜ ನ್ಮಭೂಮಿಗಾಗಿ ಅದೆಷ್ಟೋ ಕಾರ್ಯಕರ್ತರು ತಮ್ಮ ಪ್ರಾಣವನ್ನೇ ಅರ್ಪಿಸಿದರು ಅಂತಹ ವೀರರನ್ನು ಹಿಂದೂ ಸಮಾಜ ಎಂದಿಗೂ ಮರೆಯಬಾರದು. ಇವರುಗಳ ನೆನಪಾರ್ಥ ಬಜರಂಗದಳದ ಕಾರ್ಯಕರ್ತರು ಈ ಸಲುವಾಗಿ ರಕ್ತದಾನ ಮಾಡುವ ಮೂಲಕ ಸಮಾಜದ ಏಳಿಗೆಗೆ ಸದಾ ದುಡಿಯುತ್ತಿದ್ದಾರೆ” ಎಂದರು .
ಬಜರಂಗದಳ ಅಭಿ ಬಣಕಲ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಈ ವೇಳೆ ಪತ್ರಕರ್ತರು ಮಾಜಿ ಯೋಧರು. ಸಮಾಜ ಸೇವಕರು ಇದೆ ಸಂದರ್ಭದಲ್ಲಿ ರಕ್ತದಾನ ಮಾಡಿದರು ಹಾಗೆ ಹಿರಿಯ ಹಿಂದೂ ಮುಖಂಡ ಜಗದೀಶ್ ರಕ್ತದಾನ ಮಾಡಿದ ದಾನಿಗಳಿಗೆ ಪ್ರಮಾಣ ಪತ್ರ ನೀಡಿದರು
ಈ ಕಾರ್ಯಕ್ರಮದಲ್ಲಿ ರಕ್ತನಿಧಿ ಮುಖ್ಯಸ್ಥ ಮಹಮದ್ ಆಫ್ರೋಜ್ , ಭಜರಂಗದಳ ಜಿಲ್ಲಾ ಗೋ ರಕ್ಷಾ ಪ್ರಮಖ್ ಅಜಿತ್ ಜೇನುಬೈಲು, ವಿಶ್ವ ಹಿಂದೂ ಪರಿಷದ್ ತಾಲ್ಲೂಕು ಉಪಾಧ್ಯಕ್ಷ ಪ್ರಶಾಂತ್ ಹಂಡಗುಳಿ, ಅಭಿಲಾಷ್ ಉಗ್ಗೇಹಳ್ಳಿ, ಭಜರಂಗದಳ ತಾಲೂಕು ಸಂಚಾಲಕ ಸಂತೋಷ್ ಶುಭನಗರ., ಜಿಲ್ಲಾ ಸಹ ಸಂಯೋಜಕ ಪ್ರಣೀತ್, ವಿಶ್ವ ಹಿಂದೂ ಪರಿಷದ್ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಸಾಲುಮರ, ಶಶಿ ಕಿತ್ತಳೆಗಂಡಿ ಸೇರಿದಂತೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಹಾಗೂ ರಕ್ತನಿಧಿ ಸಿಬ್ಬಂದಿಗಳು ಉಪಸ್ಥಿತರಿದ್ದರು..
ವರದಿ :ಪುನೀತ್ ಕಡಿದಾಳು
9483811948
