Friday, March 27, 2026
Homeಜಿಲ್ಲಾಸುದ್ದಿಮೂಡಿಗೆರೆ : ದತ್ತ ಜಯಂತಿ ಕಾರ್ಯಕ್ರಮಕ್ಕೆ ವಿಶ್ವ ಹಿಂದೂ ಪರಿಷತ್ ತಾಲೂಕು ಅಧ್ಯಕ್ಷ ಸುದೇವ್ ಗೌಡ...

ಮೂಡಿಗೆರೆ : ದತ್ತ ಜಯಂತಿ ಕಾರ್ಯಕ್ರಮಕ್ಕೆ ವಿಶ್ವ ಹಿಂದೂ ಪರಿಷತ್ ತಾಲೂಕು ಅಧ್ಯಕ್ಷ ಸುದೇವ್ ಗೌಡ ಗುತ್ತಿ ಚಾಲನೆ

ಮೂಡಿಗೆರೆ : ದತ್ತ ಭಕ್ತರು ದತ್ತಮಾಲೆ ಧರಿಸುವ ಮೂಲಕ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ವತಿಯಿಂದ ಹಮ್ಮಿಕೊಂಡಿರುವ ದತ್ತ ಜಯಂತಿ ಕಾರ್ಯಕ್ರಮಕ್ಕೆ ಇಂದು ವಿದ್ಯುಕ್ತ ಚಾಲನೆ ಸಿಕ್ಕಿದೆ. ನಗರದ ವೇಣು ಗೋಪಾಲಸ್ವಾಮಿ ದೇವಸ್ಥಾನದಲ್ಲಿ ಗಣಪತಿ ಹೋಮ ನೆರವೇರಿಸಿ ದತ್ತ ಮೂರ್ತಿಗೆ ಅರ್ಚಕರು ವಿಶೇಷ ಪೂಜೆ ಸಲ್ಲಿಸಿದರು. ದತ್ತಗೀತೆಗಳನ್ನು ಪಠಿಸುವ ಮೂಲಕ ನೂರಾರು ಭಕ್ತರು ದತ್ತಮಾಲೆಯನ್ನು ಧರಿಸಿದರು.

ದತ್ತಜಯಂತಿ ಕಾರ್ಯಕ್ರಮ ಇಂದಿನಿಂದ ಆರಂಭವಾಗಿದ್ದು, ನವೆಂಬರ್ 28 ರಂದು ಜನ್ನಾಪುರ ಸಂಕೀರ್ತನೆ ಯಾತ್ರೆ, 29 ರಂದು ಬಾಳೂರು ಭಾಗದಲ್ಲಿ ಸಂಕೀರ್ತನ ಯಾತ್ರೆ ಹಾಗೂ ಸಂಜೆ ಮೂಡಿಗೆರೆ ಪಟ್ಟಣದಲ್ಲಿ ಬೃಹತ್ ಬೈಕ್ ರ್ಯಾಲಿ ಹಮ್ಮಿಕೊಂಡಿದ್ದೇವೆ. ಡಿಸೆಂಬರ್ 8ರವರೆಗೂ ನಡೆಯಲಿದೆ. ಡಿಸೆಂಬರ್ 2 ರಂದು ಮೂಡಿಗೆರೆ ಪಟ್ಟಣದಲ್ಲಿ ಬೃಹತ್ ಸಂಕೀರ್ತನ ಯಾತ್ರೆ ನಡೆಯುತ್ತದೆ ಡಿಸೆಂಬರ್ 1ರಂದು ದತ್ತಭಕ್ತರಿಂದ ಭೀಕ್ಷಾಟನೆ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ತಿಳಿಸಿದರು.

ಹಾಗೆ ಡಿಸೆಂಬರ್ 4 ರಂದು ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸುವ ದತ್ತಭಕ್ತರು ದತ್ತಪೀಠಕ್ಕೆ ತೆರಳಿ ದತ್ತಪಾದುಕೆ ದರ್ಶನ ಪಡೆಯುವ ಮೂಲಕ ದತ್ತಜಯಂತಿ ಕಾರ್ಯಕ್ರಮ ತೆರೆ ಬೀಳಲಿದೆ ಎಂದು ಸುದೇವ್ ಗುತ್ತಿ ತಿಳಿಸಿದರು.

ಈ ಸಂದರ್ಭದಲ್ಲಿ ಬಜರಂಗದಳ ಜಿಲ್ಲಾ ಗೋ ರಕ್ಷಾ ಪ್ರಮುಖ್ ಅಜಿತ್ ಜೇನುಬೈಲ್, ತಾರೇಶ್ ಜೇನುಬೈಲ್, ಅವಿನಾಶ್ ಜನ್ನಾಪುರ, ಬಜರಂಗದಳ ತಾಲೂಕು ಅಧ್ಯಕ್ಷ ಸಂತೋಷ್ ಶುಭನಗರ, ಶಶಿ ಕಿತ್ತಲೆಗಂಡಿ ಸೇರಿದಂತೆ ಕಾರ್ಯಕರ್ತರು ಇದ್ದರು

ವರದಿ :ಪುನೀತ್ ಕಡಿದಾಳು 

9483811948

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!