Saturday, July 11, 2026
Homeಜಿಲ್ಲಾಸುದ್ದಿಮೂಡಿಗೆರೆ: ರಸ್ತೆ ಮಧ್ಯೆ ಹಿಂಡು ಹಿಂಡಾಗಿ ಕಾಡುಕೋಣಗಳು ಪ್ರತ್ಯಕ್ಷ!

ಮೂಡಿಗೆರೆ: ರಸ್ತೆ ಮಧ್ಯೆ ಹಿಂಡು ಹಿಂಡಾಗಿ ಕಾಡುಕೋಣಗಳು ಪ್ರತ್ಯಕ್ಷ!

Telegram Group
Join Now

ಮೂಡಿಗೆರೆ: ತಾಲೂಕಿನ ಮತ್ತಿಕಟ್ಟೆ ರಸ್ತೆ ಮಧ್ಯೆ ಹಿಂಡು ಹಿಂಡಾಗಿ ಕಾಡುಕೋಣಗಳು ಪ್ರತ್ಯಕ್ಷವಾಗಿವೆ.

ಹೌದು .. ಮತ್ತಿಕಟ್ಟೆ ರಸ್ತೆಯಲ್ಲಿ ಕೋಣಗಳು ಹಿಂಡು ಹಿಂಡಾಗಿ ಪ್ರತ್ಯಕ್ಷವಾಗಿದ್ದು,  ಸಂಜೆ–ಮುಂಜಾನೆ ವೇಳೆಯಲ್ಲಿ ರಸ್ತೆ ದಾಟಿದ 10ರಿಂದ 15 ಕಾಡುಕೋಣಗಳು ಇದರಿಂದ ವಾಹನ ಸವಾರರು ಮತ್ತು ಶಾಲಾ ಮಕ್ಕಳಲ್ಲಿ ಭಯದ ವಾತಾವರಣ ಸೃಷ್ಠಿಯಾಗಿದೆ.

ಬಣಕಲ್ ಹೋಬಳಿ ವ್ಯಾಪ್ತಿಯ ಗ್ರಾಮೀಣ ರಸ್ತೆಯಲ್ಲಿ ವನ್ಯಜೀವಿಗಳ ಸಂಚಾರ ಹೆಚ್ಚಳವಾಗಿದ್ದು ಅರಣ್ಯ ಪ್ರದೇಶಕ್ಕೆ ಅಂಟಿಕೊಂಡಿರುವ ರಸ್ತೆಯಲ್ಲಿ ಅಪಘಾತದ ಆತಂಕ ಹೆಚ್ಚಾಗಿದೆ.

ಹಿಂಡು-ಹಿಂಡು ಕಾಡುಕೋಣಗಳಿಂದ ಕಾಫಿ ತೋಟಗಳು ನಾಶವಾಗಿದ್ದು, ಇತ್ತ ತೋಟಕ್ಕೆ ಹೋಗಲು ಕಾರ್ಮಿಕರು ಕೂಡ ಹಿಂದೇಟು ಹಾಕಿದ್ದಾರೆ. ಇದರಿಂದ ಕಾರ್ಮಿಕರಿಲ್ಲದೆ ಕಾಫಿ ಬೆಳೆಗಾರರು ಕಂಗಾಲಾಗಿದ್ದಾರೆ. 

ಇನ್ನು ಇತ್ತೀಚೆಗೆ ಕಾಡಾನೆಗಳ ದಾಳಿಗೆ ನಲುಗಿದ್ದ ಜನ ಇದೀಗ ಕಾಡುಕೋಣಗಳ ಹಾವಳಿಗೆ ಕಂಗಾಲಾಗಿದ್ದಾರೆ ಹೀಗಾಗಿ ಗ್ರಾಮಸ್ಥರು ಎಚ್ಚರಿಕೆಯಿಂದ ಸಂಚರಿಸಲು ಅರಣ್ಯಾಧಿಕಾರಿಗಳು ಸೂಚನೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments