Saturday, June 27, 2026
Homeಕ್ರೈಮ್Mullayanagiri: ಕಾಫಿನಾಡು ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಪ್ರವಾಸಿಗರ ಸಾಗರ: ಟ್ರಾಫಿಕ್‌ನಲ್ಲಿ ಸಿಲುಕಿದ ಸಾವಿರಾರು ಕಾರುಗಳು

Mullayanagiri: ಕಾಫಿನಾಡು ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಪ್ರವಾಸಿಗರ ಸಾಗರ: ಟ್ರಾಫಿಕ್‌ನಲ್ಲಿ ಸಿಲುಕಿದ ಸಾವಿರಾರು ಕಾರುಗಳು

ಚಿಕ್ಕಮಗಳೂರು: ಸಾಲು-ಸಾಲು ರಜೆ ಹಿನ್ನೆಲೆ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ಸಾವಿರಾರು ಸಂಖ್ಯೆಯ ಪ್ರವಾಸಿಗರು ಆಗಮಿಸಿದ್ದಾರೆ.

ಮುಳ್ಳಯ್ಯನಗಿರಿ ದತ್ತಪೀಠ, ಗಾಳಿಕೆರೆಗೆ ಪ್ರವಾಸಿಗರು ಬಂದಿದ್ದಾರೆ. ಗಿರಿ ಭಾಗಕ್ಕೆ ಏಕಾಏಕಿ ಸಾವಿರಾರು ಕಾರುಗಳು ಬಂದಿದ್ದು, ಟ್ರಾಫಿಕ್‌ನಲ್ಲಿ ಸಿಲುಕಿ ಪ್ರವಾಸಿಗರು ಪರದಾಡಿದ್ದಾರೆ. ಪಂಡರವಳ್ಳಿ – ಸೀತಾಳಯ್ಯನಗಿರಿ ಬಳಿ ಗಿರಿಯ ಕಿರಿದಾದ ರಸ್ತೆಯಲ್ಲಿ ಸಿಲುಕಿ ಗಂಟೆಗಟ್ಟಲೇ ಪ್ರವಾಸಿಗರು ಹೈರಾಣಾಗಿದ್ದಾರೆ.

ಪ್ರವಾಸೋದ್ಯಮ ಇಲಾಖೆಯ ಆನ್‌ಲೈನ್‌ ಟಿಕೆಟ್ ನಿಯಮ ಗಾಳಿಗೆ ತೂರಲಾಗಿದೆ. ಒಂದು ಕಾರಿಗೆ 1000-1500 ರೂ. ಹಣ ಪಡೆದು ಪ್ರವಾಸಿಗರ ಕಾರನ್ನು ಗಿರಿಭಾಗಕ್ಕೆ ಬಿಡಲಾಗುತ್ತಿದೆ. ಇದರಿಂದಾಗಿ ಟ್ರಾಫಿಕ್‌ ಉಂಟಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಟ್ರಾಫಿಕ್‌ ಕ್ಲಿಯರ್‌ ಮಾಡಲು ಪೊಲೀಸರು, ಚೆಕ್‌ಪೋಸ್ಟ್‌ ಸಿಬ್ಬಂದಿ ಪರದಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments