ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿ ಹಂತಕರು ಎಸ್ಕೇಪ್ ಆಗಿದ್ದಾರೆ.
ಚಿಕ್ಕಮಗಳೂರು: ಒಂಟಿ ಮಹಿಳೆಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಹುಣಸೇಮಕ್ಕಿ ಗ್ರಾಮದಲ್ಲಿ ನಡೆದಿದೆ. ಲಲಿತಾ (43) ಎಂಬುವವರೇ ಹತ್ಯೆಗೊಳಗಾದ ಮಹಿಳೆ.
ಸುಮಾರು ಇಪ್ಪತ್ತೈದು ವರ್ಷಗಳ ಹಿಂದೆಯೇ ವಿವಾಹವಾಗಿದ್ದ ಲಲಿತಾ ಗಂಡನಿಂದ ದೂರವಾಗಿ ಬಂದು ಸ್ವಂತ ಮನೆಯಲ್ಲೇ ಒಂಟಿಯಾಗಿ ವಾಸಿಸುತ್ತಿದ್ದರು ಎನ್ನಲಾಗಿದೆ.
ನಿನ್ನೆ ಸಂಜೆ ೪.೩೦ ರ ಸುಮಾರಿಗೆ ಮಹಿಳೆ ಕೊಲೆಯಾಗಿರೋದು ಬೆಳಕಿಗೆ ಬಂದಿದೆ. ತಕ್ಷಣ ಗ್ರಾಮಸ್ಥರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಇನ್ನು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲಾಸ್ಪತೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಇನ್ನು ಗ್ರಾಮಸ್ಥರೇ ಸೇರಿ ಮೃತ ಮಹಿಳೆಯ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಇದೀಗ ಕೊಲೆ ಮಾಡಿ ಎಸ್ಕೇಪ್ ಆಗಿರುವ ಹಂತಕರಿಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.