Wednesday, September 2, 2026
Homeಕ್ರೈಮ್ಎನ್.ಆರ್.ಪುರ: ಭದ್ರಾ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕ ನೀರುಪಾಲು!

ಎನ್.ಆರ್.ಪುರ: ಭದ್ರಾ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕ ನೀರುಪಾಲು!

Telegram Group
Join Now

ಎನ್.ಆರ್.ಪುರ: ಭದ್ರಾ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ನೀರುಪಾಲಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಭೈರನಕಟ್ಟೆ ಗ್ರಾಮದ ಸಮೀಪ ನಡೆದಿದೆ.

ನಿಖಿಲ್‌ ಆರ್‌ ಸಿಂಗ್(23) ಮೃತ ದುರ್ದೈವಿ. ಈತ ಶಿವಮೊಗ್ಗ ಜಿಲ್ಲೆಯ ಬೊಮ್ಮನಕಟ್ಟೆಯ ಆಶ್ರಯ ಬಡಾವಣೆ ನಿವಾಸಿಯಾಗಿರುತ್ತಾನೆ. ತನ್ನ ಇಬ್ಬರು ಸ್ನೇಹಿತರ ಜೊತೆ ಭದ್ರಾ ಹಿನ್ನೀರಿಗೆ ಈಜಲು ತೆರಳಿದಾಗ ನೀರಿನ ಸೆಳತಕ್ಕೆ ಸಿಲುಕಿ ಕೊನೆಯುಸಿರೆಳೆದಿರುವ ಈ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ.

ಸ್ಥಳಕ್ಕೆ ಅಗ್ನಿಶಾಮಕದಳ ಆಗಮಿಸಿದ್ದು ಸತತ ಕಾರ್ಯಾಚರಣೆ ಮೂಲಕ ಶವವನ್ನು ಹೊರತೆಗೆದಿದ್ದಾರೆ. ಘಟನೆ ಸಂಬಂಧ ಎನ್ಆರ್‌ ಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಯುವಕನ ಅಕಾಲಿಕ ನಿಧನದಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments