Wednesday, July 15, 2026
Homeಕ್ರೈಮ್ಎನ್.‌ ಆರ್.ಪುರ: ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐಟಿ ಉದ್ಯೋಗಿ ಸಾವು: ಸ್ನೇಹಿತನ ಮದುವೆಗೆ ಬಂದು...

ಎನ್.‌ ಆರ್.ಪುರ: ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐಟಿ ಉದ್ಯೋಗಿ ಸಾವು: ಸ್ನೇಹಿತನ ಮದುವೆಗೆ ಬಂದು ಮಸಣ ಸೇರಿದ ಯುವಕ!

Telegram Group
Join Now

ಎನ್.‌ ಆರ್.ಪುರ: ಬಾಳೆಹೊನ್ನೂರಿನ ಬನ್ನೂರು ಗ್ರಾಮಕ್ಕೆ ಸ್ನೇಹಿತನ ಮದುವೆ ಸಂಭ್ರಮಕ್ಕೆ ಬಂದಿದ್ದ ಬೆಂಗಳೂರಿನ ಐಟಿ ಉದ್ಯೋಗಿ ಭದ್ರಾ ನದಿಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ.

ಹೌದು .. ಗದಗ ಮೂಲದ ಅಭಿಷೇಕ್ (27) ಮೃತಪಟ್ಟ ದುರ್ದೈವಿ. ಸ್ನೇಹಿತರ ಜತೆ ಚಿಕ್ಕಮಗಳೂರಿನ ಬಾಳೆಹೊನ್ನೂರು ಸಮೀಪದ ಬನ್ನೂರು ಗ್ರಾಮಕ್ಕೆ ಬಂದಿದ್ದರು. ಸ್ನೇಹಿತರೊಂದಿಗೆ ಸ್ಥಳೀಯ ಹೋಂ ಸ್ಟೇನಲ್ಲಿ ವಾಸ್ತವ್ಯ ಹೂಡಿದ್ದರು. ಇಂದು ಬೆಳಗ್ಗೆ ಭದ್ರಾ ನದಿಗೆ ಈಜಲು ತೆರಳಿದ್ದರು. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಅಭಿಷೇಕ್ ನಾಪತ್ತೆಯಾಗಿದ್ದರು.‌

ಯುವಕ ನಾಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯರು ಹುಡುಕಾಟ ನಡೆಸಿದ್ದರು. ಗಂಟೆಗಳ ಕಾಲ ನಡೆಸಿದ ಕಾರ್ಯಾಚರಣೆಯ ನಂತರ, ಬನ್ನೂರು ಗ್ರಾಮದ ಸಮೀಪದ ನದಿಯಲ್ಲಿ ಅಭಿಷೇಕ್ ಮೃತದೇಹ ಪತ್ತೆಯಾಗಿದೆ.

ಮದುವೆ ಸಂಭ್ರಮದಲ್ಲಿದ್ದ ಸ್ನೇಹಿತರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಘಟನೆ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments