ಎನ್.ಆರ್.ಪುರ : ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿಯೊಡೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಸಂಗಮೇಶ್ವರಪೇಟೆ ಬಳಿ ನಡೆದಿದೆ.
ಹೌದು .. ಎದುರಿಗೆ ಬಂದ ವಾಹನಕ್ಕೆ ಸೈಡ್ ಕೊಡಲು ಹೋಗಿ ಮಳೆ ಬಂದಿದ್ದರಿಂದ ಟೈರ್ ಸ್ಕಿಡ್ ಆಗಿ ಸೈಡಿಗೆ ಹೋಗಲು ಯತ್ನಿಸಿದಾಗ ಚಾಲಕನ ನಿಯಂತ್ರಣ ಸಿಗದೆ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಖಾಸಗಿ ಬಸ್ ಮೇಲೆ ಮುರಿದು ಬಿದ್ದ ವಿದ್ಯುತ್ ಕಂಬ.
ಬೆಂಗಳೂರಿನಿಂದ ಶೃಂಗೇರಿಗೆ ಹೋಗುತ್ತಿದ್ದ ಖಾಸಗಿ ಬಸ್ ಕಂಬಕ್ಕೆ ಡಿಕ್ಕಿಯಾಗುತ್ತಿದ್ದಂತೆ ವಿದ್ಯುತ್ ಸಂಪರ್ಕ ಕಟ್ ಆಗಿದೆ ಹೊರತು ಅದೃಷ್ಟವಶಾತ್ ಯಾವುದೇ ಅನಾಹುತಗಳು ಸಂಭವಿಸದೇ ಕೂದಲೆಳೆಯ ಅಂತರದಲ್ಲಿ ತಪ್ಪಿದಕ್ಕೆ ಪ್ರಯಾಣಿಕರು ಖುಷಿ ಪಟ್ಟಿದ್ದಾರೆ.
ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
