ಚಿಕ್ಕಮಗಳೂರು : ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನಿಗೆ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸಾವಪ್ಪಿದ ಘಟನೆ ಎನ್.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದಲ್ಲಿ ನಡೆದಿದೆ.
ಹೌದು .. ಅಸ್ಸಾಂ ಮೂಲದ ರಫೀಕ್ (25) ಮೃತ ಕಾರ್ಮಿಕ. .ಎನ್.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದ ಎಸ್ಟೇಟ್ ನಲ್ಲಿ ಅಲ್ಯೂಮಿನಿಯಂ ಏಣಿ ಹತ್ತಿ ಕಾಳುಮೆಣಸು ಕುಯ್ಯುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಸ್ಥಳಕ್ಕೆ ಎನ್.ಆರ್.ಪುರ ಪೊಲೀಸರ ಭೇಟಿ ನೀಡಿ ಪ್ರಕರಣ ದಾಖಲು ಮಾಡಿದ್ದಾರೆ
