ಚಿಕ್ಕಮಗಳೂರು: ಇತ್ತೀಚೆಗೆ ನಿಧನರಾದ ಜೆಡಿಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷರು, ಹಿರಿಯ ಮುಖಂಡರಾದ ಮಡಬೂರು ಗ್ರಾಮದ ಹೆಚ್.ಟಿ ರಾಜೇಂದ್ರ ಅವರ ಮನೆಗೆ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಹೀಗೆ ಮಾತನಾಡಿದ ಅವರು, ಸಮಾಜದಲ್ಲಿನ ಶೋಷಿತರು, ರೈತರು, ದಲಿತರ ಮೂಲಹಕ್ಕಿಗಾಗಿ ವೈಯಕ್ತಿಕ ಜೀವನವನ್ನು ಜನಸಾಮಾನ್ಯರ ಏಳಿಗೆಗೆ ಮೀಸಲಿಟ್ಟು ಚಳುವಳಿ ರೂಪಿಸಿದ ಅಪರೂಪದ ಜನನಾಯಕ ರಾಜೇಂದ್ರರವರು ಎಂದು ಅವರನ್ನು ಸ್ಮರಿಸಿದರು.

ಇದೇ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷರಾದ ಶ್ರೀ ಸುಧಾಕರ್ ಶೆಟ್ಟಿ ಅವರು ಚಿಕ್ಕಮಗಳೂರು ಜಿಲ್ಲಾಧ್ಯಕ್ಷರಾದ ಶ್ರೀ ಅಜಿತ್ ರಂಜನ್ ಅವರು, ತಾಲ್ಲೂಕು ಅಧ್ಯಕ್ಷರಾದ ಶ್ರೀ ಚಂದ್ರಶೇಖರ್ ಅವರು ಸೇರಿದಂತೆ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.