Saturday, October 17, 2026
Homeಜಿಲ್ಲಾಸುದ್ದಿಅದ್ದೂರಿ ಏಳನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಾಕ್ಷಿಯಾಗಲಿದೆ ನಮ್ಮ ಮೂಡಿಗೆರೆ

ಅದ್ದೂರಿ ಏಳನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಾಕ್ಷಿಯಾಗಲಿದೆ ನಮ್ಮ ಮೂಡಿಗೆರೆ

Telegram Group
Join Now

ಮೂಡಿಗೆರೆ : ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ನವೆಂಬರ್ 6ರಂದು 7ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಮ್ಮೇಳನಾಧ್ಯಕ್ಷ ಮೇಕನಗದ್ದೆ ಲಕ್ಷ್ಮಣ್ ಗೌಡ ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ್ಷ ಬಿ.ಕೆ.ಲಕ್ಷ್ಮಣ್ ಕುಮಾರ್ ಹೇಳಿದರು.

ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಗ್ಗೆ 9 ಗಂಟೆಗೆ ಮೆರವಣಿಗೆಯ ಬಳಿಕ ರಾಷ್ಟ್ರಧ್ವಜಾ, ನಾಡಧ್ವಜಾ, ಪರಿಷತ್ ಧ್ವಜಾರೋಹಣದೊಂದಿಗೆ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್.ಶಂಕರ್ ನೆರವೇರಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಮಲೆನಾಡಿಗೆ ಸಮಸ್ಯೆಯಾಗಿ ಪರಿಣಮಿಸಿರುವ ಕಸ್ತೂರಿ ರಂಗನ್ ವರದಿ ಬಗ್ಗೆ ಗೋಷ್ಠಿ ನಡೆಯಲಿದ್ದು, ಪರಿಸರವಾದಿ ನಿರ್ಮಲಾಗೌಡ ಮತ್ತು ವಕೀಲ ಕಿಶೋರ್‌ಕುಮಾರ್ ಅವರು ಸಾಧಕ ಬಾಧಕದ ಬಗ್ಗೆ ವಿಚಾರ ಮಂಡಿಸಲಿದ್ದಾರೆ. ಆದೇ ಸಂದರ್ಭದಲ್ಲಿ ಕಸ್ತೂರಿ ರಂಗನ್ ವರದಿ ಬಗ್ಗೆ 50 ಪುಟದ ಕನ್ನಡ ಪುಸ್ತಕವೊಂದನ್ನು ಬಿಡುಗಡೆಗೊಳಿಸಲಾಗುವುದು ಎಂದು ಹೇಳಿದರು.

ನಂತರ ಖಾಸಗಿ ಶಾಲೆಗಳ ಪ್ರಭಾವದಿಂದ ಸರಕಾರಿ ಶಾಲೆಗಳ ಅಳಿವು ಉಳಿವಿನ ಬಗ್ಗೆ ಗೋಷ್ಠಿ ನಡೆಯಲಿದ್ದು, ಈ ಬಗ್ಗೆ ಸಾಹಿತಿ ವೆಂಕಟೇಶ್ ಹಾಗೂ ಚಿಕ್ಕಮಗಳೂರು ಐಡಿಎಸ್‌ಜಿ ಕಾಲೇಜು ಪ್ರಾಂಶುಪಾಲ ಎಚ್.ಎಂ.ಮಹೇಶ್ ಅವರು ವಾದ ಮಂಡಿಸಲಿದ್ದಾರೆ. ಸಂಜೆ ಸ್ಥಳೀಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಮ್ಮೇಳನಕ್ಕೆ ಎಲ್ಲಾ ಪರಿಷತ್ತಿನ ಸದಸ್ಯರು ಹಾಗೂ ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಮನವಿ ಮಾಡಿದರು.

ಪತ್ರಿಕಾ ಗೋಷ್ಠಿಯಲ್ಲಿ ಕಸಾಪ ಅಧ್ಯಕ್ಷ ಡಿ.ಕೆ.ಲಕ್ಷ್ಮಣ್ ಗೌಡ, ಸಮ್ಮೇಳನದ ಪ್ರಧಾನ ಸಂಚಾಲಕ ಪುಣ್ಯಮೂರ್ತಿ, ಜಿಲ್ಲಾ ಸಂಚಾಲಕ ಗಣೇಶ್ ಮಗ್ಗಲಮಕ್ಕಿ, ಪರಿಷತ್ ಕಾರ್ಯದರ್ಶಿ ಸುಚಿತ್ರ ಪ್ರಸನ್ನ, ನಿಕಟಪೂರ್ವ ಅಧ್ಯಕ್ಷ ಶಾಂತಕುಮಾರ್, ಹೋಬಳಿ ಅಧ್ಯಕ್ಷ ಕುನ್ನಳ್ಳಿ ರವಿ, ಖಜಾಂಚಿ ವಿ.ಪಿ.ನಾರಾಯಣ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!