Monday, August 31, 2026
Homeಕ್ರೈಮ್ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ: ಪರಾರಿಯಾಗಲು ಯತ್ನಿಸಿದ ವ್ಯಕ್ತಿ ಜಾರಿಬಿದ್ದು ಸಾವು!

ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ: ಪರಾರಿಯಾಗಲು ಯತ್ನಿಸಿದ ವ್ಯಕ್ತಿ ಜಾರಿಬಿದ್ದು ಸಾವು!

Telegram Group
Join Now

ಎನ್.ಆರ್.ಪುರ: ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ಪರಾರಿಯಾಗಲು ಯತ್ನಿಸಿದ ವ್ಯಕ್ತಿ ಜಾರಿಬಿದ್ದು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಕಡಬಗೆರೆ ಸಮೀಪದ ಕಾಫಿತೋಟದಲ್ಲಿ ನಡೆದಿದೆ.

ಗುಡ್ಡೆಕೊಪ್ಪ ಗ್ರಾಮದ ರಮೇಶ್ (35) ಮೃತ ದುರ್ದೈವಿ. ಬಾಸಾಪುರ ಅರಣ್ಯ ಪ್ರದೇಶದಲ್ಲಿ ಕಳೆದ ರಾತ್ರಿ ಗುಂಪೊಂದು ಅಂದರ್-ಬಾಹರ್ ಆಡುತ್ತಿತ್ತು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಬಾಳೆಹೊನ್ನೂರು ಪೊಲೀಸರು ದಾಳಿ ನಡೆಸಿದ್ದರು. ಅಲ್ಲಿದ್ದ 9 ಜನ ಪರಾರಿಯಾಗಲು ಯತ್ನಿಸಿದ್ದು, ಅದರಲ್ಲಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ರಮೇಶ್‌ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಜಾರಿಬಿದ್ದು, ತಲೆಗೆ ಬಂಡೆ ಬಡಿದು ಸಾವನ್ನಪ್ಪಿದ್ದಾನೆ.

ಕಳೆದ ರಾತ್ರಿ ರಮೇಶ್ ಮನೆಗೆ ಮರಳದ ಹಿನ್ನೆಲೆಯಲ್ಲಿ ಅವರ ಕುಟುಂಬದವರಲ್ಲಿ ತೀವ್ರ ಆತಂಕ ಮೂಡಿತ್ತು. ಇಂದು ಬೆಳಿಗ್ಗೆ ಕಡಬಗೆರೆ ಸಮೀಪದ ಕಾಫಿ ತೋಟ ಮತ್ತು ಅರಣ್ಯ ಪ್ರದೇಶದಲ್ಲಿ ಕುಟುಂಬಸ್ಥರು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದಾಗ, ತಲೆಯಲ್ಲಿ ತೀವ್ರ ರಕ್ತಸ್ರಾವವಾಗಿ ಮೃತಪಟ್ಟ ಸ್ಥಿತಿಯಲ್ಲಿ ರಮೇಶ್ ಅವರ ಶವ ಪತ್ತೆಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಪ್ರಕ್ರಿಯೆಗಳು ಮುಂದುವರಿದಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments