ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೂ ಸಂಕಷ್ಟ ಎದುರಾಗಿದೆ. ಈಗಾಗಲೇ ಲೈಂಗಿಕ ದೌರ್ಜನ್ಯ ಮತ್ತು ಸಂತ್ರಸ್ತೆಯ ಕಿಡ್ನ್ಯಾಪ್ ಪ್ರಕರಣದಲ್ಲಿ ರೇವಣ್ಣ ಜೈಲುಪಾಲಾಗಿದ್ದಾರೆ. ಈ ಮಧ್ಯೆ ಕುಮಾರಸ್ವಾಮಿ ಸಾಲು ಸಾಲು ಸುದ್ದಿಗೋಷ್ಠಿ ನಡೆಸುವ ಮೂಲಕ ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆಗೈಯುತ್ತಿದ್ದಾರೆ.
ಇದೀಗ ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್ ನಲ್ಲಿ ಸಂತ್ರಸ್ತರಿಗೆ ಬೆದರಿಕೆ ಹಾಕಿ ತನಿಖೆಯ ದಿಕ್ಕು ತಪ್ಪಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ಮುಖಂಡರು ಕುಮಾರಸ್ವಾಮಿ ವಿರುದ್ಧ ಎಸ್‌ಐಟಿಗೆ ದೂರು ಸಲ್ಲಿಸಿದ್ದಾರೆ. ಕುಮಾರಸ್ವಾಮಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಈಗಾಗಲೇ ಎಸ್‌ಐಟಿ ತನಿಖೆ ನಡೆಸುತ್ತಿದೆ. ಪ್ರಕರಣದಲ್ಲಿ ಇನ್ನಷ್ಟೂ ಮಹಿಳೆಯರು ಸಂತ್ರಸ್ತೆಯರಿದ್ದಾರೆ. ಆದ್ರೆ ಕುಮಾರಸ್ವಾಮಿ ಸಂತ್ರಸ್ತೆಯರ ಸ್ಥಳ ಬಹಿರಂಗ ಮಾಡ್ತಿದ್ದಾರೆ. ಹೀಗಾಗಿ ಬಹಳಷ್ಟು ಸಂತ್ರಸ್ತೆಯರು ದೂರು ಕೊಡಲು ಮುಂದಾಗುತ್ತಿಲ್ಲ ಎಂದು ಆರೋಪಿಸಿ ಕುಮಾರಸ್ವಾಮಿ ವಿರುದ್ಧ ಎಸ್‌ಐಟಿಗೆ ದೂರು ಸಲ್ಲಿಸಿದ್ದಾರೆ.